|

ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶ: ಅರ್ಜಿ ಆಹ್ವಾನ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ಇಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮಾನ್ಯಫ್ಯಾಕ್ಚರಿಂಗ್ ವಿಭಾಗದಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿರುತ್ತದೆ.

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು, ಪಿಯುಸಿ (ಸೈನ್ಸ್) ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ.

ಈ ಎಲ್ಲಾ ಕೋರ್ಸ್‍ಗಳನ್ನು ಅಧ್ಯಯನ ಮಾಡುವಾಗ 3 ವರ್ಷದ ಡಿಪ್ಲೋಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್‍ಶಿಪ್ ತರಬೇತಿಯೊಂದಿಗೆ ಮಾಸಿಕ 18,000 ರಿಂದ 20,000 ರೂಪಾಯಿವರೆಗೆ ಶಿಷ್ಯವೇತನ ನೀಡಲಾಗುತ್ತದೆ.

ಹೆಚ್ಚಿನ್ ಮಾಹಿತಿಗಾಗಿ:

ಮೊಬೈಲ್ ನಂ: 8073208137, 7899070548, 0824-2408003 ಸಂಪರ್ಕಿಸುವಂತೆ ಜಿಟಿಟಿಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 7ಇ, ಕೈಗಾರಿಕಾ ವಲಯ, ಬೈಕಂಪಾಡಿ, ಮಂಗಳೂರು-575011

Similar Posts

Leave a Reply

Your email address will not be published. Required fields are marked *