ಬೀದರ, ನವೆಂಬರ್.25 :- ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2025ರ ಅಂಗವಾಗಿ ಹಾಗೂ ರಾಜ್ಯಮಟ್ಟದ ಸಿರಿಧಾನ್ಯ ಪಾಕÀ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ (ಐಚಿಟಿಜ ಡಿಚಿಛಿes ಠಿಡಿoಜuಛಿಣs) ಪಾಕÀ ಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ಡಿಸೆಂಬರ.12 ರಂದು ಏರ್ಪಡಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಭಾಗವಹಿಸಲು ನೋಂದಾಯಿಸಿಕೊಳ್ಳಬಹುದು. ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರುತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ.ಅಭ್ಯರ್ಥಿಗಳು ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯ್ಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ.7 ರೊಳಗಾಗಿ ಇ-ಮೇಲ್ ವಿಳಾಸ jdabdr@gmail.com ಜಂಟಿ ಕೃಷಿ ನಿರ್ದೇಶಕರ ಕಛೇರಿ ಈ ವಿಳಾಸಕ್ಕೆ ಕಳುಹಿಸಬೇಕು.
ಸೂಚನೆಗಳು: ಪ್ರತಿ ಸ್ಪರ್ಧಿಗೆ ಸಿರಿಧಾನ್ಯದಿಂದ ತಯಾರಿಸಿದ ಒಂದೇ ಸಿಹಿ ತಿನಿಸು ಅಥವಾ ಖಾರ ಹಾಗೂ ಮರೆತು ಹೋದ ಖಾದ್ಯ (ಸಸ್ಯಹಾರಿ ತಿನಿಸುಗಳು ಮಾತ್ರ) ತಯಾರಿಸಲು ಅವಕಾಶವಿರುತ್ತದೆ. ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ ಡಿಸೆಂಬರ 12 ರಂದು ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಸರಿಯಾಗಿ ಬೆಳಿಗ್ಗೆ 11 ಗಂಟೆಗೆ ಪ್ರದರ್ಶಿಸಬೇಕು.
ಮರೆತು ಹೋದ ಖಾದ್ಯಗಳಡಿ ಸಿರಿಧಾನ್ಯಗಳನ್ನು ಹೊರತುಪಡಿಸಿ ಇತರೆ ದೇಸಿ ತಳಿಗಳಡಿ ಬರುವ ಆಹಾರ ಮತ್ತು ಎಣ್ಣೆಕಾಳು ಬೆಳೆಗಳ, ತರಕಾರಿ ಮತ್ತು ಹಣ್ಣುಗಳ ಇತ್ಯಾದಿ ಖಾದ್ಯಗಳನ್ನು ತಯಾರಿಸುವುದು. ತಯಾರಿಸಿದ ತಿನಿಸುಗಳ ಪ್ರದರ್ಶನ, ಬಳಸಿದ ಸಾಮಗ್ರಿಗಳು, ತೋರಿಕೆ, ರುಚಿೆ, ಸುವಾಸನೆ, ಪೌಷ್ಠಿಕತೆಗಳ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ.
ಜಿಲ್ಲಾ ಮಟ್ಟಕ್ಕೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತು ಹೋದ ಖಾದ್ಯಗಳ ತಿನಿಸಿಗೆ ತಲಾ 5000 ರೂ., 3000 ರೂ. ಹಾಗೂ 2000 ರೂ. ಗಳನ್ನು ನೀಡಲಾಗುವುದು.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ತಾವೇ ತೆಗೆದುಕೊಂಡು ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಖಾದ್ಯವನ್ನು ಅಲ್ಲಿಯೇ ತಯ್ಯಾರಿಸಲು ಬದ್ದರಾಗಿರಬೇಕು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ ಮೊಬೈಲ್ ಸಂಖ್ಯೆ: 8884003543, 8277930510 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…