ಡಿ.24 ರಂದು ಲೀನ್ ಯೋಜನೆ ಮತ್ತು ಝಡ್ ಇ.ಡಿ. ಹಾಗೂರಫ್ತು ಕುರಿತು ಒಂದು ದಿನ ಅರಿವು ಕಾರ್ಯಕ್ರಮ

ಡಿ.24ರಂದು ಬೀದರ್ ನಲ್ಲಿ ನಡೆಯಲಿರುವ ಲೀನ್ ಯೋಜನೆ ಮತ್ತು ಝಡ್ ಇ.ಡಿ. ಹಾಗೂ
ರಫ್ತು ಕುರಿತು ಒಂದು ದಿನ ಅರಿವು ಮೂಡಿಸುವ ಕಾರ್ಯಕ್ರಮ
ಬೀದರನಡೆಯಲಿದೆk9,

ಡಿಸೆಂಬರ್.22 :- ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ.) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಸಹಯೋಗದಲ್ಲಿ “ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು” (ಖಂಒಪಿ) ಲೀನ್ ಯೋಜನೆ ಮತ್ತು ಝಡ್.ಇ.ಡಿ.ಹಾಗೂ ರಫ್ತು ಕುರಿತು ಒಂದು ದಿನ ಅರಿವು ಮೂಡಿಸುವ ಕಾರ್ಯಕ್ರಮವು

ಡಿಸೆಂಬರ್.24 ರಂದು ಬೆಳಿಗ್ಗೆ 10.30 ಗಂಟೆಗೆ ಮಸ್ಟಿಫ್ ಸೆಲೆಕ್ಟ್ ಹೋಟೆಲ್, ಚಿಕ್ಕಪೇಟೆ ಹತ್ತಿರ, ನಾವಡಗೇರಿ, ಬೀದರದಲ್ಲಿ ಆಯೋಜಿಸಲಾಗಿದೆ.


ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಉದ್ಘಾಟನೆ ಮಾಡಲಿದ್ದಾರೆ.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ್ ಬದೋಲೆ ಅವರು ಭಾಗವಹಿಸಲಿದ್ದಾರೆ.


ಗೌರವಾನ್ವಿತ ಅತಿಥಿಗಳಾಗಿ ಬೀದರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡ್ಟ್ರೀಸ್ ಅಧ್ಯಕ್ಷರಾದ ಬಿ.ಜಿ.ಶೆಟಕಾರ, ಬೀದರ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ಶಿವರಾಜ ಹಲಶೆಟ್ಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ಪಿ.ವಿಜಯಕುಮಾರ, ಕೆಮಿಕಲ್ ಮತ್ತು ಫಾರ್ಮಾಸ್ಯುಟಿಕಲ್ ಸಂಘದ ಅಧ್ಯಕ್ಷರಾದ ದೇವೇಂದ್ರಪ್ಪಾ, ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸುರೇಖಾ ಮುನೊಳಿ, ವಿ.ಟಿ.ಪಿ.ಸಿ, ಕಲಬುರಗಿ ಶಾಖಾ ಕಛೇರಿಯ ಸಹಾಯಕ ನಿರ್ದೇಶಕರಾದ ಜಾಫರ್ ಖಾಸಿಂ ಅನ್ಸಾರಿ ಅವರುಗಳು ಭಾಗವಹಿಸಲಿದ್ದಾರೆ.

ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸಿಯಾ ಅಧ್ಯಕ್ಷರಾದ ಎಂ.ಜಿ.ರಾಜಗೋಪಾಲ್ ಅವರು ವಹಿಸಲಿದ್ದಾರೆ.
ಯೋಜನೆಯಡಿಯಲ್ಲಿ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರಾಜ್ಯದ 20 ಜಿಲ್ಲೆಗಳಲ್ಲಿ ಕಾಸಿಯಾ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಸ್ಥಳೀಯ ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಆಯೋಜಿಸಲು ಯೋಜಿಸಲಾಗಿದೆ.

ಹಾಗೂ ದೀರ್ಘಾವಧಿಯ ಆರ್ಥಿಕ ಸ್ಥಿರತೆ ಮತ್ತು ಬೆಳವಣಿಗೆಯನ್ನು ಸಾಧಿಸಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳೊಂದಿಗೆ ತಮ್ಮ ವ್ಯವಹಾರಗಳನ್ನು ಸಶಕ್ತಗೊಳಿಸುವುದಾಗಿದೆ.


ರಫ್ತು ಜಾಗೃತಿ ಕಾರ್ಯಗಾರ, ಲೀನ್ ಯೋಜನೆ ಮತ್ತು ಝಡ್.ಇ.ಡಿ. ಹಾಗೂ ಇತರೆ ಕೈಗಾರಿಕಾ ವಲಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸೇರಿಸಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ.


ಉದ್ದೇಶಿತ ಕಾರ್ಯಕ್ರಮವು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಉತ್ಪಾದಕತೆ ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಸಹಕಾರಿಯಾಗುವುದಲ್ಲದೇ ಎಂ.ಎಸ್.ಎಂ.ಇಗಳ ಸಾಮಥ್ರ್ಯ ವೃದ್ಧಿಗಾಗಿ ನಿರ್ಣಾಯಕವಾಗಲಿದೆ.

ಈ ಆರೀವ್ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳಬೇಕು

Source: www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 hour ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 hour ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 hour ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

1 hour ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

1 hour ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

2 hours ago