ಡಿ.24 ಬೀದರ ಜಿಲ್ಲೆಯಲ್ಲಿ ಯುವಕ ಯುವತಿಯರಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, 2024-25 ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವವನ್ನು 15 ರಿಂದ 29 ವರ್ಷದೊಳಗಿನ ಯುವಕ ಯುವತಿಯರಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್.ಎಸ್.ಎಸ್. ಹಾಗೂ ಕರ್ನಾಟಕ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಯುವ ಒಕ್ಕೂಟಗಳ ಸಂಯುಕ್ತಶ್ರಯದಲ್ಲಿ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಬೀದರದಲ್ಲಿ ಡಿಸೆಂಬರ್.28 ರಂದು ಬೆಳಿಗ್ಗೆ 10 ಗಂಟೆಯಿಂದ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಕಾರಣ ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಗಳು ಡಿಸೆಂಬರ್.28 ರಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ಕಾಲೇಜಿನಲ್ಲಿ ತಮ್ಮ ಬ್ಯಾಂಕ್ ಪಾಸ್‍ಬುಕ್, ಆಧಾರ ಕಾರ್ಡ್‍ನೊಂದಿಗೆ ಹಾಜರಾಗಿ ನೋಂದಣಿ ಮಾಡಿಕೊಳ್ಳುವಂತೆ ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಗಳ ವಿವರ: ಡಿಸೆಂಬರ್.28 ರಂದು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವೀನ್ಯತೆ ಸ್ಪರ್ಧೆ ಹಾಗೂ ಕಥೆ ಬರೆಯುವುದು (ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ), ಕವಿತೆ ಬರೆಯುವುದು (ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ), ಚಿತ್ರಕಲೆ (ಅಳತೆ 11.7”, 16.5”), ಮೊಬೈಲ್ ಫೋಟೋಗ್ರಾಫಿ, ಭಾಷಣ ಸ್ಪರ್ಧೆ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಇರಬೇಕು (ರಾಷ್ಟ್ರ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು) ಕನ್ನಡ ಭಾಷೆಯನ್ನು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದವರೆಗೆ ಮಾತ್ರ ಸೀಮಿತಗೊಳಿಸಿದೆ. (ಕನ್ನಡ, ಆಂಗ್ಲ,ಹಿಂದಿ ಭಾಷೆಯಲ್ಲಿ) ಸ್ಪರ್ಧಾಳುಗಳು ಸಿದ್ಧಪಡಿಸಕೊಂಡಿರುವ ಆಯ್ದ ವಿಷಯಗಳ ಬಗ್ಗೆ 3 ನಿಮಿಷಗಳು, ಸಾಂಸ್ಕøತಿಕ ಕಾರ್ಯಕ್ರಮ ಜನಪದ ನೃತ್ಯ (ತಂಡ), ಜನಪದ ಗೀತೆ (ತಂಡ).
ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೀದರ್‍ನ ಯುವ ಸಮಾಲೋಚಕರು (9886731405 / 8951003010), ಯುವ ಪರಿವರ್ತಕರು ಭಾಲ್ಕಿ (9164455516), ಯವ ಪರಿವರ್ತಕರು ಔರಾದ(ಬಿ) (7411916288), ಪರಿವರ್ತಕರು ಹುಮನಾಬಾದ (9535230350), ಪರಿವರ್ತಕರು ಬಸವಕಲ್ಯಾಣ (9164455516) ಸಂಪರ್ಕಿಸಬಹುದಾಗಿದೆ ಹಾಗೂ ಪ್ರಯಾಣ ಭತ್ತೆ ಮತ್ತು ನಗದು ಬಹುಮಾನವನ್ನು ಜಿಲ್ಲಾ ಮಟ್ಟದಲ್ಲಿ ತಾಲೂಕುಗಳಿಂದ ಆಗಮಿಸಿ ಭಾಗವಹಿಸುವ ಸ್ಪರ್ಧಾಳುಗಳು ನೋಂದಣಿ ಸಮಯದಲ್ಲಿ ನೀಡು ಬ್ಯಾಂಕ್ ಖಾತೆಗೆ ನೇರವಾಗಿ ಕೆ2 ಮೂಲಕ ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.
Source: www.prajaprabhat.com
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…