ಡಿ.29 ರಂದು  ಬೀದರ್ ಜಿಲೆಯಲಿ ಯುವ ಸ್ಪಂದನ ವಿಶೇಷ ಕಾರ್ಯಾಗಾರ

26ಡಿ.24:- ಬೀದರ ಜಿಲ್ಲೆಯಲ್ಲಿ ಯುವಜನರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಪೋಷಕರಿಗೆ ಯುವ ಸ್ಪಂದನ ವಿಶೇಷ ಕಾರ್ಯಾಗಾರವನ್ನು ಡಿಸೆಂಬರ್.29 ರಂದು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಯುವ ಸ್ಪಂದನ ಕೇಂದ್ರ ಒಳಾಂಗಣ ಕ್ರೀಡಾಂಗಣದ ಆವರಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೀದರದಲ್ಲಿ ನಡೆಸಲಾಗುತ್ತಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಯುವ ಸ್ಪಂದನ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಯುವಜನ ಸಂಬಂಧಿ ಯಾವುದೇ ಗೊಂದಲಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಯಕ್ರಮದ ಅಂಗವಾಗಿ ಪೋಷಕರಿಗೆ ಯುವ ಸ್ಪಂದನ ವಿಶೇಷ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ.

ಆದ್ದರಿಂದ ಜಿಲ್ಲೆಯ ಎಲ್ಲಾ ಪೋಷಕರು ಸದರಿ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಈ ಕಾರ್ಯಾಗಾರದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಯುವಜನರ ಪೋಷಕರಿಗೆ ಆದ್ಯತೆ ನೀಡಲಾಗುವುದು. ಒಂದು ಕಾರ್ಯಾಗಾರದಲ್ಲಿ ಪೋಷಕರಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ.

ಈ ಕಾರ್ಯಾಗಾರವನ್ನು ಮಕ್ಕಳ ಪೋಷಣೆ, ಪೋಷಕರ ಆತಂಕ ನಿವಾರಣೆ, ಒತ್ತಡ ನಿರ್ವಹಣೆ, ಮಕ್ಕಳೊಂದಿಗಿನ ಸಂವಹನ ಇತ್ಯಾದಿ ವಿಷಯಗಳ ಬಗ್ಗೆ ಚಟುವಟಿಕೆಗಳ ಮೂಲಕ ಕೈಗೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ (08482-227222), (9886731405), (7996300194) ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Source: www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

6 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

6 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

6 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

7 hours ago