ಬೀದರ.01.ಆಗಸ್ಟ್.25:- ಡೋಣ ಮೂಲಕ ನ್ಯಾನೊ ಯೂರಿಯಾ ಹಾಗೂ ನ್ಯಾನೂ ಡಿ.ಎ.ಪಿ. ಬಳಸುವದರಿಂದ ಮಣ್ಣಿನ ಫಲವತ್ತತೆಗೆ ಹಾಗೂ ಪರಿಸರದ ಮೇಲೆ ಯಾವುದೇ ದುಷ್ಪರಿಣಾಮ ಬೀರದೆ ಬೆಳೆ ಗುಣಮಟ್ಟದಲ್ಲಿ ವೃದ್ಧಿಯಾಗುತ್ತದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕಿ ದೇವಿಕಾ ತಿಳಿಸಿದರು.
ಅವರು ಇತ್ತೀಚಿಗೆ ಜಿಲ್ಲೆಯ ಬೀದರ ತಾಲ್ಲೂಕಿನ ರೈತ ಸಂಪರ್ಕ ಕೇಂದ್ರ, ಮನ್ನಳ್ಳಿ ಹೊಬಳಿ ವ್ಯಾಪ್ತಿಯಲ್ಲಿ ಬರುವ ರೇಕುಳಗಿ ಗ್ರಾಮದಲ್ಲಿ ಪ್ರಗತಿಪರ ರೈತರಾದ ರಹಮತಉಲ್ಲಾ ಹುಸೇನಿ ರವರ ಕ್ಷೇತ್ರದಲ್ಲಿ ನ್ಯಾನೊ ಯೂರಿಯಾ ಹಾಗೂ ನ್ಯಾನೊ ಡಿ.ಎ.ಪಿ. ಬಳಕೆ ಕುರಿತು ಪ್ರಾತ್ಯಕ್ಷತೆಯಲ್ಲಿ ಮಾತನಾಡಿದರು.
ಅತಿಯಾದ ಹರಳು ರೂಪದ ಯೂರಿಯಾ ಬಳಕೆಯಿಂದ ಮಣ್ಣಿನ ಆಮ್ಮಿಯತೆ, ನೀರಿನ ಮಾಲಿನ್ಯ ಹೆಚ್ಚುತ್ತದೆ. ಬೆಳೆಗಳ ಕೀಟ ರೋಗಗಳಿಗೆ ತುತ್ತಾಗುವ ತರಕಾರಿ, ಹಣ್ಣು, ಧಾನ್ಯಗಳಲ್ಲಿ ವಿಷಕಾರಿಯಾದ ನೈಟ್ರೇಟ್ ಹಾಗೂ ನೈಟ್ರೇಟ್ ಪದಾರ್ಥಗಳ ಅಂಶ ಹೆಚ್ಚಾಗುತ್ತದೆ. ಶಿಶುಗಳಿಗೆ ಬ್ಲೂ ಬೇಬಿ ಸಿಂಡೋಮ್ ಸಮಸ್ಯೆ ಕಾಡಬಹುದು. ಮಾನವನಿಗೆ ಕ್ಯಾನ್ಸರ್ ಹೆಚ್ಚಾಗುತ್ತದೆ, ಅಂತರ್ಜಲವು ಮಾಲಿನ್ಯಗೊಳ್ಳಬಹುದು. ನ್ಯಾನೊ ಯೂರಿಯಾ ದ್ರವ ರೂಪದಲ್ಲಿ ಇರುವುದರಿಂದ ಗೊಬ್ಬರಕಿಂತ 8-10 ಪಟ್ಟು ಹೆಚ್ಚು ಪರಿಣಾಮಕಾರಿಯಾಗಿದೆ.
ಎಲೆಗಳಗೆ ಸಿಂಪರಣೆ ಮಾಡುವುದರಿಂದ ಬೆಳೆಗಳಿಗೆ ತ್ವರಿತ್ಯ ಪೆÇೀಷಕಾಂಶಗಳು ಸಿಗುತ್ತವೆ ಎಂದು ತಿಳಿಸಿ, ರೈತರು ಹೆಚ್ಚು ಹೆಚ್ಚು ಹರಳು ರೂಪದ ಯೂರಿಯಾ ಬದಲಾಗಿ ದ್ರವ ರೂಪದ ನ್ಯಾನೊ ಯೂರಿಯಾ ಹಾಗೂ ನ್ಯಾನೊ ಡಿ.ಎ.ಪಿ. ಬಳಸಲು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಬೀದರ ಸಹಾಯಕ ಕೃಷಿ ನಿರ್ದೇಶಕಿ ಆರತಿ ಪಾಟೀಲ್, ರಾಜಕುಮಾರ ಎಕ್ಕೇಳಿ.
ಸಹಾಯಕ ಕೃಷಿ ನಿರ್ದೇಶಕರು (ವಿಷಯ ತಜ್ಞರು) ವಿಜಯಕುಮಾರ ಸಿರಂಜೆ, ಕೃಷಿ ಅಧಿಕಾರಿ ರೈತ ಸಂಪರ್ಕ ಕೇಂದ್ರ ಮನ್ನಳ್ಳಿ (Iಈಈಅಔ) ಸಂಸ್ಥೆಯ ಜಿಲ್ಲಾ ವ್ಯವಸ್ತಾಪಕರು ಸುರೇಶ ಸೇರಿದಂತೆ ಗ್ರಾಮದ ಪ್ರಗತಿಪರ ರೈತರಾದ ರೆಹಮತಉಲ್ಲಾ ಹುಸೇನಿ ಮಲ್ಲಿಕಾರ್ಜುನ ಹಚ್ಚಿ ಹಾಗೂ ಗ್ರಾಮದ ರೈತಬಾಂಧವರು ಮತ್ತು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು.
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…