ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಕಡ್ಡಾಯ

ಕೊಪ್ಪಳ.01.ಆಗಸ್ಟ್.25: ಕೊಪ್ಪಳದ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಉದ್ದಿಮೆಗಳು ಕರ್ನಾಟಕ ಮುನ್ಸಿಪಾಲಟಿ ಬೈಲಾ 2020ರ ನಿಯಮಾನುಸಾರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ತಂಬಾಕು ಮಾರಾಟ ಪರವಾನಿಗೆಯನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಾದ ಶಾಂತಮ್ಮ ಕಟ್ಟಿಮನಿ, ಸಾಮಾಜಿಕ ಕಾರ್ಯಕರ್ತೆ ಸರಸ್ವತಿ ಹಾಗೂ ಭಾಗ್ಯನಗರ ಪ.ಪಂಚಾಯತ ಮುಖ್ಯಾಧಿಕಾರಿ ಸುರೇಶ ಬಬಲಾದ ಇವರ ನೇತೃತ್ವದ ತಂಡವು ಜುಲೈ 24 ರಂದು ದಾಳಿ ನಡೆಸಿ ಪರವಾನಿಗೆ ರಹಿತ ಮಾರಾಟಗಾರರಿಗೆ ದಂಡ ವಿಧಿಸಿ ಸರ್ಕಾರದ ನಿಯಮದಂತೆ ಷರತ್ತುಗಳನ್ನು ಪಾಲಿಸಿ ಪರವಾನಿಗೆ ಪಡೆಯಲು ತಿಳಿಸಿದರು.


ಷರತ್ತುಗಳು: ನಿಯಮ 4ರ ಅನ್ವಯ ವ್ಯಾಪಾರ ಸ್ಥಳದಲ್ಲಿ ಕಡ್ಡಾಯವಾಗಿ 60+45 ಸೇಂ ಮೀ ಅಳತೆಯ ಧೂಮಪಾನ ನಿಷೇಧಿಸಿದೆ ಎಂಬ ನಾಮ ಫಲಕ ಅಳವಡಿಸುವುದು ಹಾಗೂ ಧೂಮಪಾನ ಆಗದಂತೆ ಮತ್ತು ಉತ್ತೇಜಿಸುವ ಬೆಂಕಿ ಪೊಟ್ಟಣ ಲೈಟರ್, ಆಶ್ ಟ್ರೇಗಳನ್ನು ಇಡುವಂತಿಲ್ಲ. ನಿಯಮ 5 ರ ಅನ್ವಯ ವ್ಯಾಪಾರ ಸ್ಥಳದ ಮುಂಭಾಗ ಅಥವಾ ಒಳಗಡೆ ತಂಬಾಕು ಉತ್ಪನ್ನಗಳ ಪ್ರತ್ಯಕ್ಷ ಹಾಗೂ ಪರೋಕ್ಷ ಜಾಹಿರಾತುಗಳನ್ನು ಮಾಡುವಂತಿಲ್ಲ. ನಿಯಮ 6ಎ ಅನ್ವಯ ವ್ಯಾಪಾರದ ಸ್ಥಳದಲ್ಲಿ ಕಡ್ಡಾಯವಾಗಿ 60+30ಸೆಂ.ಮೀ ಅಳತೆಯ 18 ವರ್ಷದ ಒಳಗಿನ ಮಕ್ಕಳಿಗೆ ತಂಬಾಕು ಮಾರಾಟ ನಿಷೇಧ ಎಂಬ `ನಾಮಫಲಕ ಅಳವಡಿಸುವುದು ಹಾಗೂ 18 ವರ್ಷದ ಒಳಗಿನ ಮಕ್ಕಳಿಂದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ಅವರ ಮೂಲಕ ಮಾರಾಟ ಮಾಡಿಸುವಂತಿಲ್ಲ. ನಿಯಮ 6ಬಿ ಪ್ರಕಾರ ಶೈಕ್ಷಣಿಕ ಸಂಸ್ಥೆಯ 100 ಗಜದ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ ಒಂದುವೇಳೆ ಉಲ್ಲಂಘನೆ ಆದಲ್ಲಿ ಪರವಾನಿಗೆಯನ್ನು ರದ್ದು ಪಡಿಸಲಾಗುವುದು.

ನಿಯಮ 7ರ ಪ್ರಕಾರ ತಂಬಾಕು ಉತ್ಪನ್ನಗಳ ಮೇಲೆ ಶೇಕಡಾ 85 ರಷ್ಟು ಆರೋಗ್ಯ ಎಚ್ಚರಿಕೆ ಚಿಹ್ನೆಗಳಿಲ್ಲದ ಹಾಗೂ ಸ್ಪಷ್ಟ ಚಿಹ್ನೆಗಳಿಲ್ಲದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಡ್ಡಾಯವಾಗಿ ನಿಷೇಧಿಸಿದೆ ಅಲ್ಲದೆ ಈ ಉದ್ದಿಮೆಯನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ಮುನ್ಸಿಪಾಲಟಿ ಬೈಲಾ 2020ರ ಅನ್ವಯ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಬಳಸುವ ಸ್ಥಳಗಳ ನಿಯಂತ್ರಣ ಮತ್ತು ತಪಾಸಣೆ ಮಾಡುವುದು ಕಡ್ಡಾಯವಾಗಿದೆ ಎಂದು ಭಾಗ್ಯನಗರ ಪ.ಪಂಚಾಯತ ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago