01/08/2025 7:22 AM

Translate Language

Home » ಲೈವ್ ನ್ಯೂಸ್ » ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

Facebook
X
WhatsApp
Telegram

ಬೀದರ.30.ಜುಲೈ.25:- 2025-26ನೇ ಸಾಲಿನ ಎನ್.ಹೆಚ್.ಎಂ ಯೋಜನೆಯ ಅಡಿಯಲ್ಲಿ ಬ್ರಿಮ್ಸ್ ಬೋಧಕ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಕರೆದಿರುವ 11 ಶುಶ್ರೂಷಾಧಿಕಾರಿಗಳ ಹುದ್ದೆಗಳ 1:2 ಅನುಪಾತದಲ್ಲಿ 22 ಆಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನ ಫಲಕಕ್ಕೆ  ಪ್ರಕಟಿಸಲಾಗಿದ್ದು, ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ದಿನಾಂಕ: 01-08-2025 ರ ಸಂಜೆ 4.30 ಗಂಟೆಯೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ದಿನಾಂಕ: 02.08.2025 ರಂದು ಮುಂಜಾನೆ 10:00 ಗಂಟೆಗೆ 1:2 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲದಾಖಲಾತಿಗಳನ್ನು ಪರಿಶೀಲಿಸಲಾಗುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಹಾಜರಾಗಲು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!