Home » ಲೈವ್ ನ್ಯೂಸ್ » ತಿಪ್ಪರಸನಾಳ: ವಸತಿ ಕಾಲೇಜಿನ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ತಿಪ್ಪರಸನಾಳ: ವಸತಿ ಕಾಲೇಜಿನ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.13.ಜೂನ್.26: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ತಿಪ್ಪರಸನಾಳ (ಕುಕನೂರು) ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.


ಕಾಲೇಜು ವಿಭಾಗದ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆ ವಿವರ ಮತ್ತು ವಿದ್ಯಾರ್ಹತೆ (ಆಂಗ್ಲಮಾಧ್ಯಮ) ಭೌತಶಾಸ್ತ್ರ ವಿಭಾಗದ ಒಂದು ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ ಇದ್ದು, ಎಂಎಸ್ಸಿ ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಜೂನ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಪ್ರಾಂಶುಪಾಲರು, ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು, ತಿಪ್ಪರಸನಾಳ (ಕುಕನೂರು) ಮಂಗಳೂರು-ಕುಕನೂರು ರಸ್ತೆ, ಕೊಪ್ಪಳ ಜಿಲ್ಲೆ, ಇಲ್ಲಿಗೆ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8105487095, 8618317638, ಇಮೇಲ್ mmdrpucgirlsylb@gmail.com ಗೆ ಸಂಪರ್ಕಿಸಬಹುದಾಗಿದೆ ಎಂದು ತಿಪ್ಪರಸನಾಳ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನ ಪ್ರಕಟಣೆ ತಿಳಿಸಿದೆ. 

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology