ಬೀದರ.26.ಮೇ.25:- ಇಂದು ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ.
ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಪಟ್ಟಣದ ಪ್ರವಾಸಿ ಮಂದಿರದಿಂದ ಎಪಿಎಂಸಿ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯ ನೇತ್ರತ್ವ ವಹಿಸಿದ್ದ ಶಾಸಕರು ಧ್ವಜ ಹಿಡಿದು ಹೆಜ್ಜೆ ಹಾಕಿದರು. ಎಪಿಎಂಸಿ ಎದುರುಗಡೆಯ ಕನ್ನಡಾಂಬೆ ವೃತ್ತದಲ್ಲಿ ಸಮಾವೇಶ ನಡೆಯುವ ವೇಳೆ ಶಾಸಕರು ಕುಳಿತಲ್ಲೇ ನಿಶಕ್ತರಾದರು.
ಶಾಸಕರು ಮೆರವಣಿಗೆಯಲ್ಲಿ ಕುಣಿದು ದಣಿದಿದ್ದಾರೆ. ಹೀಗಾಗಿ ಸುಸ್ತಾಗಿ ತಲೆ ಸುತ್ತಿದೆ. ಬೇರೆ ಏನೂ ಸಮಸ್ಯೆ ಇಲ್ಲ. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಶಾಸಕರ ಆಪ್ತರು ತಿಳಿಸಿದ್ದಾರೆ.
ಯಾತ್ರೆಯಲ್ಲಿ ಬೀದರ್ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ಮಠಾಧೀಶರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.
ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…
ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…
ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…
ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…
ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…
ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…