ತುಮಕೂರು.11.ಫೆ.25:- ಇಂದು ತುಮಕೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಶೋಷಿತ ಸಮುದಾಯಗಳು ತಲೆ ಎತ್ತಿ ಬದುಕುವಂತಹ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶ ಬಾಬಾ ಸಾಹೇಬ್ ಜೀನರಾಳ್ಕರ್ ಹೇಳಿದರು.
ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ‘ಸಂವಿಧಾನದ ಆಶಯಗಳು ಮತ್ತು ಪ್ರಜಾಪ್ರಭುತ್ವ’ ಕುರಿತು ಉಪನ್ಯಾಸ ನೀಡಿದರು.
ಸತತವಾಗಿ ಒತ್ತಡ ತಂದು ಕೆಲವರಿಗೆ ಸೀಮಿತವಾಗಿದ್ದ ಮತದಾನದ ಹಕ್ಕನ್ನು ಎಲ್ಲರಿಗೂ ಸಿಗುವಂತೆ ಮಾಡಿದ್ದಾರೆ. ಹಲವು ಹೋರಾಟಗಳಲ್ಲಿ ಪಾಲ್ಗೊಂಡು ಮನುಸ್ಮೃತಿ ಸುಡುವ ಮೂಲಕ ದೇಶದ ಚಳವಳಿಯ ದಿಕ್ಕನ್ನೇ ಬದಲಿಸಿದರು ಎಂದು ಸ್ಮರಿಸಿದರು.
ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ‘ಯುವಜನರು ಅಂಬೇಡ್ಕರ್ ಓದುವುದರಿಂದ ಜವಾಬ್ದಾರಿಯುತ ಪ್ರಜೆಯಾಗಿ ರೂಪಗೊಳ್ಳಲು ಸಹಕಾರಿಯಾಗುತ್ತದೆ. ಜಾತಿ, ಧರ್ಮ, ಭಾಷೆ, ಲಿಂಗ ತಾರತಮ್ಯವಿಲ್ಲದೆ ಬದುಕುವಂತಹ ಅವಕಾಶವನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ’ ಎಂದು ಅಭಿಪ್ರಾಯಪಟ್ಟರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ‘ಅಂಬೇಡ್ಕರ್ ಬರೆದ ಸಂವಿಧಾನದ ಕೆಲವೇ ಜಾತಿಗೆ ಸೀಮಿತ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಇದನ್ನು ಹೋಗಲಾಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದರು.
ಪ್ರೊ.ಬಿ.ರಮೇಶ್, ಪ್ರೊ.ಕೆ.ಜಿ.ಪರಶುರಾಮ್, ಲೇಖಕ ಎಂ.ವಿ.ಶಂಕರಾನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ ಇತರರು ಉಪಸ್ಥಿತರಿದ್ದರು
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…