ಬೀದರ.09.ಫೆಬ್ರುವರಿ.25:- 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬoಧಿಸಿದoತೆ, ತಕ್ಷಣದಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550 ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450 ಪ್ರತಿ ಕ್ವಿಂಟಾಲ್‌ಗೆ, ಸೇರಿ ಒಟ್ಟು ರೂ.8,000 ಪ್ರತಿ ಕ್ವಿಂಟಾಲ್ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ಮಾಹೆಯಲ್ಲಿ ಭರವಸೆ ನೀಡಿದ್ದರು.
ಅದರಂತೆ ಮುಖ್ಯ ಮಂತ್ರಿಗಳು ಅನುಮೋದನೆ ನೀಡಿದ್ದು ಹಾಗೂ ಇಂದು ಆರ್ಥಿಕ ಇಲಾಖೆ ಸಹಮತಿ ನೀಡಲಾಗಿರುತ್ತದೆ. ಈ ಕುರಿತು ಸಂಬAಧಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.
ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ
ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್, ಎಫ್‌ಪಿಒ, ಟಿಎಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…