ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ (10 ತಿಂಗಳು)

ಬೀದರ.04.ಮಾರ್ಚ.25:-ಬೀದರ ಜಿಲ್ಲೆಯ ರೈತ ಮಕ್ಕಳಿಗಾಗಿ ಚಂದ್ರಪಳ್ಳಿ,  ತಾಲ್ಲೂಕು ಚಿಂಚೋಳಿ ಜಿಲ್ಲಾ ಕಲಬುರಗಿ ಇಲ್ಲಿ ಹತ್ತು ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ (ಜಿಲ್ಲಾ ಪಂಚಾಯತ) ತೋಟಗಾರಿಕೆ ಉಪನಿರ್ದೇಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ತರಬೇತಿ ಅರ್ಜಿ ನಮೂನೆಯನ್ನು ದಿನಾಂಕ: 01-03-2025 ರಿಂದ 31-03-2025 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ (ರಾಜ್ಯ ವಲಯ), ಬೀದರ ಅಥವಾ ಇಲಾಖೆ ವೆಬ್‍ಸೈಟ್‍ www.horticulture.kar.nic.in.  ದಲ್ಲಿ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ.


ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 01-04-2025 ರ ಸಂಜೆ 5.30 ಗಂಟೆಯವರೆಗೆ ಸಲ್ಲಿಸಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 08-04-2025 ಬೆಳಿಗ್ಗೆ 10 ಗಂಟೆಗೆ ಇದ್ದು, ತಮ್ಮ ಮೂಲ ದಾಖಲೆಗಳೊಂದಿಗೆ ತೋಟಗಾರಿಕೆ ಉಪ ನಿರ್ದೇಶಕರು (ಜಿಲ್ಲಾ ಪಂಚಾಯತ) ಬೀದರ ರವರ ಕಛೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08482-233139 ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

4 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

5 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

5 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

6 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

7 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

8 hours ago