Categories: ಬೀದರ

ತೋಟಗಾರಿಕೆ ಮಹಾವಿದ್ಯಾಲಯದಲ್ಲಿ   ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ

ಬೀದರ.22.ಜೂನ್.25:- ಅಂತರರಾಷ್ಟ್ರೀಯ ಯೋಗ ದಿನವನ್ನು ವಿಶ್ವ ಯೋಗ ದಿನ ಎಂದು ಕರೆಯುತ್ತಾರೆಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಹೇಳಿದರು.

ಅವರು ಶನಿವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ, ರಾಷ್ಟಿçಯ ಸೇವಾ ಯೋಜನೆ ಮತ್ತು ತೋಟಗಾರಿಕೆ ಮಹಾವಿದ್ಯಾಲಯ ಬೀದರ ಇವರುಗಳ ಸಹಯೋಗದೊಂದಿಗೆ ತೋಟಗಾರಿಕೆ ಮಹಾವಿದ್ಯಾಲಯ ಬೀದರನಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೊದಲ ಬಾರಿಗೆ ಇದನ್ನು 21 ಜೂನ್ 2015 ರಂದು ಆಚರಿಸಲಾಯಿತು. ಭಾರತದ ಪ್ರಧಾನಮಂತ್ರಿಯವರು 27 ಸೆಪ್ಟೆಂಬರ್ 2014 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗಕ್ಕೆ ಸಂಬAಧಿಸಿದ ಪ್ರಭಾವಶಾಲಿ ಭಾಷಣವನ್ನು ನೀಡುವ ಮೂಲಕ ಈ ಉಪಕ್ರಮವನ್ನು ಕೈಗೊಂಡರು. ಈ ಕಾರಣಕ್ಕಾಗಿ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಲಾಯಿತು ಎಂದು ಹೇಳಿದರು.


ಈ ವರ್ಷದ ಘೋಷವಾಕ್ಯ “ಒಂದು ಭೂಮಿ ಒಂದು ಆರೋಗ್ಯ” ಈ ಮೂಲಕ ಜಗತ್ತೆ ಒಂದು ಎಂದು ಸಾರುವ ಮೂಲಕ ಎಲ್ಲರ ಆರೋಗ್ಯ ಅತೀ ಮುಖ್ಯವಾಗಿರುವುದೆಂದು ತೋರಿಸುತ್ತದೆ. ಪ್ರಪಂಚದಾದ್ಯoತ ಸಾವಿರಾರು ಜನರು ಇದನ್ನು ತಮ್ಮ ದೈನಂದಿನ ದಿನಚರಿಯ ಭಾಗವಾಗಿಸಿಕೊಂಡಿದ್ದಾರೆ. ಹಾಗೂ ಇದರಿಂದ ರೋಗಮುಕ್ತ ಜೀವನವನ್ನು ಹೊಂದಲು ಯೋಗವು ಬಹಳ ಸಹಕಾರಿಯಾಗಿದೆ ಎಂದರು.

ಕು. ಆಶಾರಾಣಿ ಹೌದಖಾನಿ, ಯುವ ಯೋಗ ಪಟು, ಬೀದರ ರವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮದದಲ್ಲಿದ್ದಂತಹ ಮಹಾವಿದ್ಯಾಲಯದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳಿಗೆ ಯೋಗದ ಬಗ್ಗೆ ಮಾಹಿತಿ ನೀಡಿ ಯೋಗದ ಆಸನಗಳ ಪ್ರಾತ್ಯಕ್ಷಿಕೆ ಮೂಲಕ ಯೋಗವು ಮಾಡುವಂತೆ ಸೂಚಿಸಿದರು.

ಈ ಕಾರ್ಯಕ್ರಮದಲ್ಲಿ ರಾಷ್ಟಿçಯ ಸೇವಾ ಯೋಜನೆಯ ಸಂಯೋಜಕರಾದ ಡಾ. ವಿಜಯಮಹಾಂತೇಶ ಹಾಗೂ ಡಾ. ರಮೇಶ ನಾಯಕ್, ಮಹಾವಿದ್ಯಾಲಯದ ಬೋಧಕ, ಬೊಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಥಮ ವರ್ಷದ ಎನ್.ಎಸ್.ಎಸ್. ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.

prajaprabhat

Share
Published by
prajaprabhat

Recent Posts

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

2 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

2 hours ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

2 hours ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

2 hours ago

ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಗಸ್ಟ್ 17ರಂದು ಮಾಹಿತಿ ಕಾರ್ಯಗಾರ.

ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…

2 hours ago

ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ

ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…

3 hours ago