09/06/2025 8:09 PM

Translate Language

Home » ಲೈವ್ ನ್ಯೂಸ್ » ತ್ವರಿತ ಜಾತಿ ಆದಾಯ ಪ್ರಮಾಣ ಪತ್ರಕ್ಕೆ
ಸಹಾಯವಾಣಿ ಸ್ಥಾಪನೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!

ತ್ವರಿತ ಜಾತಿ ಆದಾಯ ಪ್ರಮಾಣ ಪತ್ರಕ್ಕೆ
ಸಹಾಯವಾಣಿ ಸ್ಥಾಪನೆ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ.!

Facebook
X
WhatsApp
Telegram


ಬೀದರ.14.ಫೆಬ್ರುವರಿ.25:-ಜಿಲ್ಲೆಯಲ್ಲಿ ಗ್ರಾಮ ಅಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ / ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕುಲಕ್ಕಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


      ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು / ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08482-224319 ನ್ನು ಸಂಪರ್ಕಿಸಬಹುದಾಗಿದೆ.

ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲವೆಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!