ಬೀದರ.02.ಮೇ.25:- ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತ್ವರಿತ ಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ದೂರಿನಲ್ಲಿ ನೊಂದವರು ತಕ್ಷಣವೇ ರಕ್ಷಣೆ ಪಡೆಯಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಚಿವರು ಹೇಳಿದ್ದಾರೆ. ಬಸವಣ್ಣರು ನಿರ್ಮಿಸಿದ ಸಮತೆಯ ಸಮಾಜದ ತತ್ವಗಳಿಗೆ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬೋಧಿಸಿದ ಸಂವಿಧಾನಾತ್ಮಕ ಮೌಲ್ಯಗಳಿಗೆ ಅಪಮಾನವಾಗುವಂತಹ ಇಂತಹ ಘಟನೆಗಳು ನಡೆದಿರುವುದರ ಬಗ್ಗೆ ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮಗಳು, ಜಯಂತಿ ಉತ್ಸವಗಳ ಸಂದರ್ಭದಲ್ಲಿ ಯಾವುದೇ ರೀತಿಯ ಜನಾಂಗೀಯ ಉದ್ವಿಗ್ನತೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಮುಗ್ಧ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಖುದಾವಂದಪೂರ ಘಟನೆಯ ಕುರಿತು ಸಚಿವರು ತೀವ್ರ ಖಂಡನೆ ವ್ಯಕ್ತಪಡಿಸಿ, “ಬೀದರ್ ಶಾಂತಿಯ ತೋಟ. ಇಲ್ಲಿನ ಸೌಹಾರ್ದತೆಯ ವಾತಾವರಣಕ್ಕೆ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಜವಾಬ್ದಾರಿ ಹೊತ್ತು ನಡೆದುಕೊಳ್ಳಬೇಕು. ವೈಯಕ್ತಿಕ ವಿಚಾರಗಳನ್ನು ಸಾರ್ವತ್ರೀಕರಣ ಮಾಡುವ ಪ್ರಯತ್ನದಿಂದ ಶಾಂತಿ ಕದಡುವಂತಾಗಬಾರದು. ಒಂದು ಕಿಡಿಯನ್ನು ನಿರ್ಲಕ್ಷಿಸಿದರೆ ಅದು ಬೆಂಕಿಯ ಜ್ವಾಲೆಯಾಗುತ್ತದೆ,” ಎಂದು ತಿಳಿಸಿದ್ದಾರೆ.
ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…