ದಲಿತ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಆರೋಪ.

ಹಾವೇರಿ.19.ಏಪ್ರಿಲ್.25:- ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ.ಇಲ್ಲಿನ ದಲಿತ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಇದೀಗ ಮುಸ್ಲಿಂ ಯುವಕನ ಮೇಲೆ ಆರೋಪ ಕೇಳಿ ಬಂದಿದೆ.

ಶಿಲ್ಪಾ ಶಿಗ್ಗಾಂವಿ ಪಟ್ಟಣದ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು‌. ನವೀನ್ ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಫರ್ನಿಚರ್ ಅಂಗಡಿ ಮಾಲೀಕನೆ ರಂಜಾನ್ ನದಾಫ್‌. ಕೆಲ ದಿನಗಳ ಹಿಂದಷ್ಟೇ ನವೀನ್ ಮೇಲೆ ಫರ್ನಿಚರ್ ಅಂಗಡಿಯಲ್ಲಿ‌ ಕಳ್ಳತನ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಟ್ಟಾಗಿದ್ದ ಅಂಗಡಿ ಮಾಲೀಕ ರಂಜಾನ್, ನವೀನ್ ಮೊಬೈಲ್ ಕಸಿದುಕೊಂಡಿದ್ದ.

ಮೊಬೈಲ್ ನೋಡಿದಾಗ ನವೀನ್ ಶಿಲ್ಪಾ ಜೊತೆ ಚಾಟಿಂಗ್ ಮಾಡಿರೋದು ಗೊತ್ತಾಗಿದೆ.‌ ನವೀನ್ ಮೊಬೈಲ್‌ನಲ್ಲಿದ್ದ ಶಿಲ್ಪಾ ನಂಬರ್ ತೆಗೆದುಕೊಂಡು ರಂಜಾನ್, ಆಕೆಗೆ ಕರೆ ಮಾಡಿ ಟಾರ್ಚರ್ ಮಾಡಿದ್ದ. ನವೀನ್ ನಿನಗೆ ದುಡ್ಡು ಕಳಿಸಿದ್ದಾನೆ. ನಿಮಗೆ ದುಡ್ಡು ಎಲ್ಲಿಂದ ಬಂತು? ನಮ್ಮ ಫರ್ನಿಚರ್ ಅಂಗಡಿಯಲ್ಲಿ ಕಳ್ಳತನ ಮಾಡಿ ನವೀನ್ ನಿನಗೆ ಹಣ‌ ಕಳಿಸಿದ್ದಾನೆ. ಇದನ್ನ ಬಹಿರಂಗ ಮಾಡ್ತೀನಿ. ನಿಮ್ ತಂದೆ ತಾಯಿಗೂ ಹೇಳ್ತೀನಿ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.‌

ಫರ್ನಿಚರ್ ಅಂಗಡಿ ಮಾಲೀಕನನ್ನು ಬಂಧಿಸಲು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.‌ ನವೀನ್ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ. ಯುವಕನ ಮನೆಯಲ್ಲಿ ಬಹಳ ಬಡತನ ಇತ್ತು. ಅವರ ತಾಯಿಗೆ ಔಷಧಿ ಕೊಡಿಸಬೇಕಿತ್ತು. ನವೀನ್‌ಗೆ ಅಂಗಡಿ ಮಾಲೀಕ ಸಂಬಳವನ್ನೇ ಕೊಟ್ಟಿಲ್ಲ. ಹೀಗಾಗಿ, ಅಂಗಡಿಯಲ್ಲಿ ಸ್ವಲ್ಪ ವಸ್ತು ಕಳ್ಳತನ ಮಾಡಿ ತಾಯಿಗೆ ಔಷಧಿ ಕೊಡಿಸಿದ್ದಾನೆ. ಅದಕ್ಕಾಗಿಯೇ ನವೀನ್‌ಗೆ ಹೊಡೆದು ರಂಜಾನ್ ಪೊಲೀಸ್ ಕಂಪ್ಲೆಂಟ್ ಮಾಡಿದ್ದಾನೆ. ಯುವಕನ ಮೊಬೈಲ್ ಕಸಿದುಕೊಂಡು ಅದರಲ್ಲಿ ಶಿಲ್ಪಾ ನಂಬರ್ ತಗೊಂಡು ಟಾರ್ಚರ್ ಮಾಡಿದ್ದಾನೆ. ಇದರಿಂದ ಆ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದಾಳೆ. ಆರೋಪಿಯನ್ನು ಬಂಧಿಸಿ ಎಂದು ಮುತಾಲಿಕ್‌ ಒತ್ತಾಯಿಸಿದ್ದಾರೆ.

ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಈ ಸಂಬಂಧ ನದಾಫ್ ನನ್ನು ಬಂಧಿಸುವಂತೆ ಆಗ್ರಹ ವ್ಯಕ್ತವಾಗಿದೆ.ಬಿಸಿಎ ಓದುತ್ತಿದ್ದ 22 ವರ್ಷದ ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇನ್ನು ನವೀನ್ ಆರೋಪಿ ರಂಜಾನ್ ನದಾಫ್ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು.

ನವೀನ್ ವಿರುದ್ಧ ಕಳ್ಳತನ ಆರೋಪ ಮಾಡಿದ್ದ ನದಾಫ್, ನವೀನ್ ಮೊಬೈಲ್ ಅನ್ನು ಕಸಿದುಕೊಂಡಿದ್ದನು. ನಂತರ ರಂಜಾನ್ ನದಾಫ್, ನವೀನ್ ಮತ್ತು ಶಿಲ್ಪಾರ ಚಾಟ್ ಮೆಸೆಜ್ಗಳನ್ನು ನೋಡಿದ್ದು ಶಿಲ್ಪಾ ಮೊಬೈಲ್ ನಂಬರ್ ತೆಗೆದುಕೊಂಡು ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ.

ಹೀಗಾಗಿ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

6 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

6 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

6 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

6 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

6 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

7 hours ago