ದೆಹಲಿ ಗಣರಾಜ್ಯೋತ್ಸವ- ಕಾರ್ಯಕ್ರಮಕ್ಕೆ.ಆಯುಕ್ತರು ಹೇಮಂತ್ ಎಂ. ನಿಂಬಾಳ್ಕರ


ಬೀದರ.27.ಜನವರಿ.25:-ದೆಹಲಿಯಲ್ಲಿ ಜನವರಿ 26. ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್‌ಲೈನ್‌ದಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವAತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.


ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್‌ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವAತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ,  Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.


https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ,  Login to participate  ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವÀ ಒಟಿಪಿ ನಮೂದಿಸಿ, ನಂತರ  Resend. OTP/ Submitted EzÀgÀ°è  ssubmitt        ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. 

Lakkundi : cradle of stone craft  ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು. ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿAದ  MYGOVPOLL 357037,12  ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಓಟ ಮಾಡಬಹುದಾಗಿದೆ.

prajaprabhat

Recent Posts

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

4 minutes ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

7 minutes ago

ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ: ವಸತಿ<br>ವ್ಯವಸ್ಥೆಗೆ ಸ್ಥಾನಿಕ ವೀಕ್ಷಕರ ನೇಮಕ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ‍್ಯಾಲಿಗೆ ಸ್ಥಾನಿಕ…

12 minutes ago

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಶಿಕ್ಷೆ ಪ್ರಕಟ

ಕೊಪ್ಪಳ.07.ಆಗಸ್ಟ್ .25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮರೇಶ ಬಡಿಗೇರ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು…

16 minutes ago

ಆ. 15 ರಂದು ಕೊಪ್ಪಳ ನಗರಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೊಪ್ಪಳ.07.ಆಗಸ್ಟ್.25: ಕೊಪ್ಪಳ ನಗರಸಭೆಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆ.…

20 minutes ago

ಯುವನಿಧಿ ಯೋಜನೆಯಡಿ ನೋಂದಣಿ, ಸ್ವಯಂ ಘೋಷಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25:- ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ವೆಬ್‌ಸೈಟ್ ವಿಳಾಸ https://sevasindhuservices,karnataka.gov.in     ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ…

1 hour ago