ದೇವರ ದಾಸಿಮಯ್ಯನವರ ವಚನಗಳನ್ನು ಇಂದಿಗೂ ಪ್ರಸ್ತುತವಾಗಿವೆ-ಸಚಿವ ಈಶ್ವರ ಬಿ.ಖಂಡ್ರೆ

ಬೀದರ.02.ಏಪ್ರಿಲ್.25:-ದೇವರ ದಾಸಿಮಯ್ಯನವರ ವಚನಗಳು 12ನೇ ಶತಮಾನದಲ್ಲಿ ಹೇಳಿದರು ಕೂಡ ಇಂದಿಗೂ ಪ್ರಸ್ತುತವಾಗಿವೆ ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬೀದರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ನಡೆದ ಶ್ರೀ ದೇವರ ದಾಸಿಮಯ್ಯ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಧ್ಯ ವಚನಕಾರ ದೇವರ ದಾಸಿಮಯ್ಯ ನವರು ಸಮಾಜದ ಸುಧಾರಣೆಗೆ ಅವರ ಕೊಡುಗೆ ಅಪಾರವಾಗಿದೆ. ಮಹಿಳೆಯರಿಗೆ ಸ್ವಾತಂತ್ರ‍್ಯ, ಸಮಾನತೆ ಒದಗಿಸುವುದು ಮತ್ತು ಸಮಾಜವನ್ನು ಒಂದುಗೂಡಿಸುವ ಕೆಲಸಗಳು ದೇವರ ದಾಸಿಮಯ್ಯ ನವರ ವಚನಗಳಲ್ಲಿ ಕಾಣಬಹುದಾಗಿದೆ. ನೇಕಾರ ಮತ್ತು ಜಾಡರ ಸಮುದಾಯದವರು ಕಾರ್ಯ ನಿಷ್ಠಾವಂತರಾಗಿದ್ದಾರೆ, ನಾಗರಿಕತೆ ಅತ್ಯುತ್ತಮ ಬೆಳವಣಿಗೆ ಇವರ ಕೊಡುಗೆ ಅಪಾರವಾಗಿದೆ ಎಂದರು.

ನಮ್ಮ ಸರ್ಕಾರ ಕೂಡ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ‘ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು’ ಎಂಬAತೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಎಲ್ಲರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಹಾಗೂ ನೇಕಾರ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಈಡೇರಿಸುತ್ತೆವೆ ಮತ್ತು ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ನಿವೇಶನ ನೀಡುವುದಾಗಿ ತಿಳಿಸಿದರು.

ಲಿಂಗಾಯತ ಮಹಾಮಠದ ಸ್ವಾಮಿಜಿಗಳಾದ ಪೂಜ್ಯ ಶ್ರೀ ಪ್ರಭುದೇವ ಮಹಾಸ್ವಾಮಿಜಿ ಅವರು ತಮ್ಮ ಅತಿಥಿ ಉಪನ್ಯಾಸದಲ್ಲಿ ಮಾತನಾಡಿ, ದೇವರ ದಾಸಿಮಯ್ಯ ನವರು 1130 ರಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಎಂಬ ಹಳ್ಳಿಯಲ್ಲಿ ಜನಿಸಿದರು. ಇವರ ಹೆಸರು 6 ವಚನಕಾರರ 12 ವಚನಗಳಲ್ಲಿ ಕಾಣಬಹುದು. ಇವರ 176 ವಚನಗಳು ದೊರತ್ತಿವೆ. ಇವರು ರಾಮನಾಥ ಎಂಬ ಅಂಕಿತನಾಮದಿoದ ವಚನಗಳನ್ನು ರಚಿಸಿದ್ದಾರೆ. ಸಮಾಜದ ಸುಧಾರಣೆಗೆ ಮತ್ತು ಸಮಾಜದ ಒಳಿತಿಗಾಗಿ ಇವರ ವಚನಗಳು ಮುಖ್ಯವಾಗಿವೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುಂಚಿತವಾಗಿ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಶ್ರೀ ದೇವರ ದಾಸಿಮಯ್ಯ ನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಂತರ ರಥ ಮೆರವಣಿಗೆಗೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶಿಲವಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರಾದ ಸಿದ್ರಾಮ ಸಿಂಧೆ ಮತ್ತು ಸಮಾಜದ ಮುಖಂಡರಾದ ಸೋಮಶೇಖರ ಅಮಲಾಪೂರೆ, ರಾಮಕೃಷ್ಣ ಸಾಳೆ, ನಾಗಪ್ಪ ಜಮಗಿ, ಮಹಾದೇವ ಚೌಡೆಕರ, ಶರಣಪ್ಪ ಹಾವಗೊಂಡ, ಪ್ರಶಾಂತ್ ಸಿಂದ್ರೆ, ಧನರಾಜ ಹಂಗರಗಿ ಮತ್ತು ಇತರೆ ಮುಖಂಡರು ಉಪಸ್ಥಿತರಿದ್ದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago