ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಮಾತನಾಡಿ, ಮೂಲಸೌಕರ್ಯ ಅಭಿವೃದ್ಧಿ, ಆರ್ಥಿಕ ಅಭಿವೃದ್ಧಿ, ಕೃಷಿ ಜತೆಗೆ ಸಾಂಸ್ಕೃತಿಕ ಅಭಿವೃದ್ಧಿ ಹಾಗೂ ಏಕತೆಗೆ ಸರಕಾರ ವಿಶೇಷ ಒತ್ತು ನೀಡಿದೆ. ಇಂದು ಬೆಳಿಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, ದೇಶದ ಭಾಷೆಗಳು ರಾಷ್ಟ್ರದ ಏಕತೆ ಮತ್ತು ಸಾಂಸ್ಕೃತಿಕ ಇತಿಹಾಸಕ್ಕೆ ಪ್ರಮುಖ ಆಧಾರವಾಗಿದೆ ಎಂದು ಹೇಳಿದರು.
ದೇಶದ ಐತಿಹಾಸಿಕ ವೈವಿಧ್ಯತೆಯ ಕುರಿತು ಮಾತನಾಡಿದ ಶ್ರೀ ರೆಡ್ಡಿ, ಭಾರತವು 121 ಪ್ರಮುಖ ಭಾಷೆಗಳನ್ನು ಮತ್ತು ಸುಮಾರು 1600 ಉಪಭಾಷೆಗಳನ್ನು ಹೊಂದಿದೆ ಎಂದು ಹೇಳಿದರು. ಭಾಷೆಗಳು ಸಂವಹನ ವಿಧಾನ ಮಾತ್ರವಲ್ಲದೆ ಜ್ಞಾನ ಸಂಸ್ಕೃತಿ ಮತ್ತು ಸಂಪ್ರದಾಯಗಳ ಪ್ರಮುಖ ಪರಂಪರೆಯಾಗಿದೆ ಎಂದು ಅವರು ಹೇಳಿದರು. ಭಾಷೆಗಳು ಸಬಲೀಕರಣ ಮತ್ತು ವೈಯಕ್ತಿಕ ಅಭಿವ್ಯಕ್ತಿಗೆ ಪ್ರಮುಖ ಮಾಧ್ಯಮವಾಗಿರುವುದರಿಂದ ಭಾಷೆಗಳು ಮತ್ತು ಉಪಭಾಷೆಗಳನ್ನು ಸಂರಕ್ಷಿಸಲು ಮತ್ತು ರಕ್ಷಿಸಲು ಕೇಂದ್ರ ಸರ್ಕಾರವು ಉಪಕ್ರಮಗಳನ್ನು ತೆಗೆದುಕೊಂಡಿದೆ ಎಂದು ಶ್ರೀ ರೆಡ್ಡಿ ಉಲ್ಲೇಖಿಸಿದ್ದಾರೆ.
ಈ ವರ್ಷದ ಅಕ್ಟೋಬರ್‌ನಲ್ಲಿ ಕೇಂದ್ರ ಸಚಿವ ಸಂಪುಟವು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನವನ್ನು ನೀಡಿದೆ ಎಂದು ಶ್ರೀ ರೆಡ್ಡಿ ಹೇಳಿದ್ದಾರೆ. 11 ಭಾಷೆಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿದ ಏಕೈಕ ದೇಶ ಭಾರತ ಎಂದರು.
