‘ದೇಶ ಸೇವೆಯೆ ಈಶ ಸೇವೆ’- ಪ್ರೊ.ಅಂಬಿಕಾದೇವಿ ಕೊತಮೀರ್

ಔರಾದ.24.ಮೇ.25:- ಸರಕಾರಿ ಪ್ರಥಮ ದರ್ಜೆ ಕಾಲೇಜು, ಔರಾದ ವತಿಯಿಂದ ಗಣೇಶಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಸೇವೆ ಯೋಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಂಬಿಕಾದೇವಿ ಕೊತಮೀರ್ ಮಾತನಾಡಿ  ಭಾರತ ಸಮನ್ವಯದ ನಾಡಾಗಿದ್ದು, ಸಹೋದರತೆ, ಶಾಂತಿಯನ್ನು ಬಯಸುವ ದೇಶ. ದೇಶದ ಹಿತವೇ ನಮ್ಮ ಹಿತ ಈ ಭಾವನೆ ಪ್ರತಿಯೊಬ್ಬ ಯುವಕರಿಗು ಅನ್ವಯಿಸುತ್ತದೆ ಎಂದರು.

ಉದ್ಘಾಟಕರಾಗಿ ಆಗಮಿಸಿದ ಗಣೇಶಪೂರ ಗಾಮ ಪಂಚಾಯತ ಸದಸ್ಯರಾದ ಶ್ರೀ ಜ್ಞಾನೇಶ್ವರ  ಮಾತನಾಡಿ ಈ ಸಾಲಿನ ರಾಷ್ಟ್ರೀಯ ಸೇವಾ ಯೋಜನ ಶಿಬಿರ ನಮ್ಮ ಗ್ರಾಮದಲ್ಲಿ ನಡೆಸುವ ತೀರ್ಮಾನ ಕೈಗೊಂಡಿರುವುದು ಅತ್ಯಂತ ಸಂತೋಷ ತಂದಿದೆ ಎಂದರು. ಎನ್.ಎಸ್.ಎಸ್ ಘಟಕದ ಸಂಯೋಜಕರಾದ ಹಾಗು ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ. ವಿನಾಯಕ ಕೊತಮೀರ್ ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನ ಯುವಕರಲ್ಲಿ ದೇಶಭಕ್ತಿಯ ಅನಿವಾರ್ಯತೆಯನ್ನು ವಿವರಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶಗಳನ್ನು ಕುರಿತು ಉಪನ್ಯಾಸ ನೀಡಿದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ರಾಮಣ್ಣ ಉಪ್ಪಾರ ಮಾತನಾಡಿ ಇಂದಿನ ಯುವಕರೆ ನಾಳಿನ ನಾಯಕರು ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಸಹನೆ, ಸಮಯ ಪ್ರಜ್ಞೆ, ಆತ್ಮ ವಿಶ್ವಾಸ, ಪರಿಶ್ರಮ ಇಂತಹ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದರು.

ವಿದ್ಯಾರ್ಥಿಗಳು ಶ್ರಮದಾನ, ಸ್ವಚ್ಚತಾ ಚಟುವಟಿಕೆಗಳನ್ನು ಮಾಡಿದರು ಇದಕ್ಕು ಮುಂಚೆ ಎನ್.ಎಸ್.ಎಸ್ ಧ್ವಜಾರೋಹಣ ನೆರವೆರಿಸಲಾಯಿತು. ಪ್ರೊ. ವಿನಾಯಕ ಕೊತಮೀರ್ ಸ್ವಾಗತಿಸಿದರು, ಶ್ರೀ ಸುನೀಲ ಮಾಳಗೆ ವಂದಿಸಿದರು ಪ್ರೊ. ಸಂಜುಕುಮಾರ ತಾಂದಳೆ ನಿರುಪಿಸಿದರು ಡಾ. ದಯಾನಂದ ಬಾವುಗೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

6 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

6 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

6 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

7 hours ago