ಧನ್ವಂತರಿ ವನ, ಪಾರಂಪರಿಕ ವೈದ್ಯ ಭವನ ಹಾಗೂ ವೈದ್ಯಸಮ್ಮೇಳನ ಬಗ್ಗೆ ಕ್ರಮ-ಸಚಿವ ಈಶ್ವರ ಖಂಡ್ರೆ

ಬೀದರ.03.ಮಾರ್ಚ.25:-ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಧನ್ವಂತರಿ ವನ ನಿರ್ಮಾಣ ಹಾಗೂ ಪಾರಂಪರಿಕ ವೈದ್ಯ ಪರಿಷತ್ ಭವನಗಳ ನಿರ್ಮಾಣ ಹಾಗೂ ಜಿಲ್ಲಾ ಮಟ್ಟದಲ್ಲಿ ಪಾರಂಪರಿಕ ವೈದ್ಯ ಸಮ್ಮೇಳನಕ್ಕೆ ಅನುದಾನ ನೀಡುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ, ವ್ಯಜೀವಿ ಮಂಡಳಿ ಸದಸ್ಯರಾದ ವಿನಯ ಮಾಳಗೆ, ಮುಖ್ಯ ಅರಣ್ಯ ಸಂರಕ್ಷಣಾದಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿ ಕರ್ನಾಟಕ ಜೀವ ವೈವಿದ್ಯ ಮಂಡಳಿಯ ಜಗತರಾಮ, ಗುಲಬರ್ಗಾ ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಗಳಾದ ಸುನಿಲ ಪನವಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ, ಡಾ.ಗಿರೀಶ ಬದೋಲೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ

ಎಂ.ಎಂ.ವಾನತಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಾಮಾಜಿಕ ಅರಣ್ಯ ವಿಭಾಗ ಎ.ಬಿ.ಪಾಟಿಲ, ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಪಾರಂಪರಿಕ ವೈದ್ಯ ಪರಿಷತ್ ಕರ್ನಾಟಕ ಅಧ್ಯಕ್ಷರಾದ ಜಿ.ಮಹಾದೇವಯ್ಯ, ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ತನ ಅಧ್ಯಕ್ಷರಾದ ಆನಂದ ವಿ.ಹೆರೂರ, ಪಾರಂಪರಿಕ ವೈದ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ, ಪ್ರೊ.ಜಗನ್ನಾಥ ಹೆಬ್ಬಾಳೆ, ಪ್ರೊ.ಎಸ್.ವಿ.ಕಲ್ಮಟ್, ರಾಜಕುಮಾರ ಹೆಬ್ಬಾಳೆ ಸೇರಿದಂತೆ ರಾಜ್ಯದ ವಿವಿದೆಡೆಯಿಂದ ಆಗಮಿಸಿದ ಪಾರಂಪರಿಕ ವೈದ್ಯರು, ವಿವಿಧ ಸಮಿತಿಗಳ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


ನಗರದ ಬೆಲ್ದಾಳೆ ಕನ್ವೆನ್ಷನ್ ಹಾಲ್‍ನಲ್ಲಿಂದು ಜರುಗಿದ 3 ದಿನಗಳ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಸರಕಾರವು ಪ್ರಥಮ ಬಾರಿಗೆ ಬೃಹತ್ ಪ್ರಮಾಣದಲ್ಲಿ ಇಂಥ ಸಮ್ಮೇಳನವನ್ನು ನಡೆಸುತ್ತಿದ್ದು ವೈದ್ಯ ಪರಿಷತ್ ಪದಾಧಿಕಾರಿಗಳು ನೀಡಿದ ಬೇಡಿಕೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಶೀಲಿಸಲಾಗುವುದೆಂದರು.
ರಾಜ್ಯದ ಎಲ್ಲ ಔಷಧೀಯ ಸಸ್ಯಗಳನ್ನು ದಾಖಲಿಸಿ ಮನಕುಲದ ಒಳತಿಗಾಗಿ ಉಪಯೋಗಿಸುವ ಹಿನ್ನೆಲೆಯಲ್ಲಿ ಜೀವ ವೈವಿದ್ಯತೆ ಮಂಡಳಿಯ ವಿವಿಧ ಕಾರ್ಯಗಳನ್ನು ಮಾಡುತ್ತಿದೆ.

ಈಗಾಗಲೇ ಗ್ರಾಮ ಪಂಚಾಯತ, ತಾಲ್ಲೂಕ ಪಂಚಾಯತ, ಜಿಲ್ಲಾ ಪಂಚಾಯತ ಮಟ್ಟದಲ್ಲಿ ಔಷಧೀಯ ಸಸ್ಯಗಳನ್ನು ದಾಖಲಿಕರಿಸಲಾಗಿದೆ.


ಇತ್ತೀಚಿನ ದಿನಮಾನಗಳಲ್ಲಿ ಹವಾಮಾನ ಬದಲಾವಣೆಯಿಂದ ಪ್ರಕೃತಿ ವಿಕೋಪ, ಸುನಾಮಿ, ಬರ, ಗುಡ್ಡ ಕುಸಿತ, ತಾಪಮಾನ ಹೆಚ್ಚಳದಂತಹ ಘಟನೆಗಳನ್ನು ಕಾಣುತ್ತಿದೆ. ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಉತ್ತಮ ಭೂಮಿಯನ್ನು ಹಸ್ತಾಂತರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಗಿಡ ನೆಡುವುದು, ಗಿಡ ಮರಗಳನ್ನು ಸಂರಕ್ಷಿಸುವುದು ದಿನನಿತ್ಯದ ಕಾಯಕವಾಗಬೇಕು.
ಅರಣ್ಯ ಇಲಾಖೆಯಿಂದ ಎರಡು ವರ್ಷಗಳಲ್ಲಿ ಒಟ್ಟು 9 ಕೋಟಿ ಸಸಿಗಳನ್ನು ನೆಡಲಾಗಿದೆ.

ಅರಣ್ಯ ಬ್ಲಾಕ್‍ಗಳಲ್ಲಿ ಕಂದಾಯ ಹಾಗೂ ರೈತರ ಜಮೀನುಗಳಲ್ಲಿ ರಸ್ತೆ ಬದಿಗಳಲ್ಲಿ ಗಿಡ ಮರಗಳನ್ನು ಬೆಳೆಸಲಾಗುತ್ತಿದೆಯೆಂದು ಸಚಿವರು ತಿಳಿಸಿದರು.
ನೂರಾರು ವರ್ಷಗಳಿಂದ ಪಾರಂಪರಿಕವಾಗಿ ಹರಿದು ಬಂದಿರುವ ಈ ಪಾರಂಪರಿಕ ವೈದ್ಯಕೀಯ ಜ್ಞಾನವನ್ನು ಉಳಿಸಿ ಬೆಳೆಸಬೇಕಾಗಿದೆ. ಅನೇಕ ರೋಗಗಳಿಗೆ ಪಾರಂಪರಿಕ ವೈದ್ಯ ಪದ್ಧತಿ ಸಿದ್ಧ ಔಷಧಿಯಾಗಿದೆ.

ಕರ್ನಾಟಕ ರಾಜ್ಯವು ಔಷಧೀಯ ಸಸ್ಯಗಳ ಶ್ರೀಮಂತ ಆಗರವಾಗಿದೆ. ಇದನ್ನು ಸಂರಕ್ಷಿಸಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಸಸ್ಯಗಳು ದಾಖಲಾತಿಯಾಗಬೇಕು. ದತ್ತಾಂಶ ಉಪಯೋಗವಾಗಬೇಕು ವಾಸಿಯಾಗದ ಅನೇಕ ರೋಗಗಳಿಗೆ ಉತ್ತಮ ಚಿಕಿತ್ಸೆ ಪದ್ಧತಿಯಾಗಿದೆಯೆಂದು ಸಚಿವರು ತಿಳಿಸಿದರು.


ಅಧುನಿಕ ಚಿಕಿತ್ಸಾ ಪದ್ಧತಿ ಅಲೋಪತಿಯಲ್ಲಿ ಸಾಕಷ್ಟು ಸಂಶೋಧನೆ ನಡೆಯುತ್ತಿದೆ. ಅನೇಕ ರೋಗಗಳನ್ನು ನಿವಾರಿಸಲಾಗುತ್ತಿದೆ. ಇದರಿಂದ ಅಡ್ಡ ಪರಿಣಾಮ ಕಂಡುಬರುತ್ತವೆ. ಆದರೆ ಪಾರಂಪರಿಕ ಔಷಧೀಯ ಸಸ್ಯಗಳಿಂದ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲವೆಂದರು. ಪಾಶ್ವವಾಯು ಹಾಗೂ ಆಸ್ತಮಗಳಿಗೆ ಈಗಲೂ ಸಾಕಷ್ಟು ಜನರು ಆರ್ಯುವೇದಿಕ ಔಷಧಿಗಳಿಗೆ ಆಶ್ರಯವಾಗಿದ್ದಾರೆ.


ಕಾರ್ಯಕ್ರಮದ ಸಾನಿದ್ಯ ವಹಿಸಿದ್ದ ಅನುಭವ ಮಂಟಪದ ಅಧ್ಯಕ್ಷರಾದ ಪೂಜ್ಯ ಶ್ರೀ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, 12ನೇ ಶತಮಾನದ ಬಸವಾದಿ ಶರಣರಾದ ವೈದ್ಯ ಸಂಗಣ್ಣನವರು ಪಾರಂಪರಿಕ ಔಷಧೀಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು.

ಈ ಕುರಿತಂತೆ ಹಲವಾರು ವಚನಗಳನ್ನು ಬರೆದಿದ್ದಾರೆ ಎಂದರು. ಯಾವುದಾದರೂ ರೋಗ ಬಂದಲ್ಲಿ ಶಿವಾರ್ಚನೆಯ ಬೇಡಿಕೊಳ್ಳುವೆಂದು ಇಷ್ಟಲಿಂಗ ಶಿವಯೋಗ ಮಾಡಿಕೊಳ್ಳಬೇಕೆಂದು ವೈದ್ಯ ಸಂಗಣ್ಣನವರು ತಿಳಿಸಿದ್ದಾರೆ. ಇಷ್ಟಲಿಂಗದಲ್ಲಿ ಅನೇಕ ಗಿಡಮೂಲಿಕೆ ರಸ ಹಾಕುವುದರಿಂದ ರೋಗ ನಿವಾರಣೆಗೆ ಸಹಾಯವಾಗುತ್ತದೆ. ಶರಣ ವೈದ್ಯ ಸಂಗಣ್ಣನವರ ಹೆಸರಿನಲ್ಲಿ ಪ್ರತಿ ವರ್ಷ ಪ್ರಶಸ್ತಿಯನ್ನು ನೀಡುವಂತೆ ಅವರು ತಿಳಿಸಿದರು.


ಇದೇ ಸಂದರ್ಭದಲ್ಲಿ ಜೀವ ವೈವಿದ್ಯತಾ ಮಂಡಳಿಯಿಂದ ಜೀವ ವೈವಿದ್ಯತೆ ಸಂರಕ್ಷಣೆಯಲ್ಲಿ ನಿರತ 3 ಜನರಿಗೆ ತಲಾ 50 ಸಾವಿರ ನಗದು ಪ್ರಶಸ್ತಿ ವಿತರಿಸಲಾಯಿತು.

prajaprabhat

Recent Posts

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ  ಸಲುವಾಗಿ ನಿರಂತರ ಪ್ರಯತ್ನ. ಡಾ. ಹನಮಂತ್ ಗೌಡಾ ಕಲ್ಮನಿ

ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …

2 hours ago

ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು

ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…

2 hours ago

ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜ್ ನ ಬಿ ಎಸ್ ಸಿ ಪದವಿಯಲ್ಲಿ ಮಧು ಸಿ. ಕಾಲೇಜ್ ಗೆ ಟಾಪರ್

ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…

3 hours ago

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…

7 hours ago

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

18 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

1 day ago