“ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಡ್ಯಾಮ್ ನೀರನ್ನು ಬಿಡಬಾರದು” .ಪ್ರೊ ನೀಲಕಂಠ ಭೂಮಣ್ಣವರ

ಧಾರವಾಡ.25.ಮೇ.25:- ಘಟಪ್ರಭಾ ನದಿಯ ಹಿಡಕಲ್ ಡ್ಯಾಮ್ ಜಲಾಶಯ ಈ ಭಾಗದ ರೈತರ ಜೀವನ ನಾಡಿಯಾಗಿದ್ದು. ರೈತರ ಭೂಮಿಗೆ ಹಾಗೂ ಬೆಳಗಾವಿ ನಗರ ಒಳಗೊಂಡು ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಿಗೆ ಕುಡಿಯುವ ನೀರಿನ ಜೀವ ಜಲವಾಗಿದೆ. ಹೀಗಾಗಿ ಯಾವ ಕಾರಣಕ್ಕೂ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಹಿಡಕಲ್ ಜಲಾಶಯದಿಂದ ನೀರನ್ನು ಬಿಡಬಾರದೆಂದು ಸಾಮಾಜಿಕ ಹೋರಾಟಗಾರ ಉಪನ್ಯಾಸಕ ಪತ್ರಕರ್ತ ಪ್ರೊ.ನೀಲಕಂಠ ಭೂಮಣ್ಣವರ ಆಗ್ರಹಿಸಿದ್ದಾರೆ.

ಕನ್ನಡಪರ ಸಂಘಟನೆಗಳು, ವಿವಿಧ ಮಠಾಧೀಶರ ಹೋರಾಟ, ಭಾಗದ ಪ್ರತಿನಿಧಿಗಳ ಒತ್ತಡದಿಂದಾಗಿ ಈ ಕಾಮಗಾರಿಗೆ ಬ್ರೇಕ್ ಬಿದ್ದಿತ್ತು.

ಆದರೆ ಮತ್ತೆ ಎಲೆಮರೆಯಂತೆ ಈ ಕಾಮಗಾರಿಯನ್ನುಮುಂದುವರಿಸುತ್ತಿದ್ದು ಜನರಿಗೆ ಆತಂಕ ಸೃಷ್ಟಿ ಮಾಡಿದೆ.

ನಮ್ಮ ಭಾಗದ ಜನಪ್ರತಿನಿಧಿಗಳು, ಸಾರ್ವಜನಿಕರು, ರೈತರು, ಹೋರಾಟಗಾರರು ಎಚ್ಚೆತ್ತುಕೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಬಹಳಷ್ಟು ನೀರಿನ ಅಭಾವ ಎದುರಿಸಬೇಕಾಗುತ್ತದೆ.


ಇದೀಗ ಕಾಮಗಾರಿಗೆ ಮತ್ತೊಮ್ಮೆ ಚಾಲನೆ ನೀಡಿದ್ದು ಬೈಲ್ಹೊಂಗಲ್ ಗೋಕಾಕ್ ತಾಲೂಕಿನ ಪ್ರದೇಶದಲ್ಲಿ ಜೆಸಿಬಿಗಳನ್ನು ಬಳಸಿ ಪೈಪ್ ಲೈನ್ ಕಾರ್ಯ ತೀವ್ರವಾಗಿ ನಡೆಯುತ್ತಿದೆ. ಇದರಿಂದ ಅನುಮಾನಗೊಂಡ ಈ ಭಾಗದ ಜನತೆ ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ.

ಮೇ 2 ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ಹಿಂತೆಗೆದುಕೊಳ್ಳಬೇಕು. ಇಲ್ಲವಾದರೆ ಪ್ರಗತಿಪರ ಸಂಘಟನೆಗಳು, ರೈತ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ, ಭಾಗದ ಜನ ಪ್ರತಿನಿಧಿಗಳನ್ನು, ಮಠಾಧೀಶರುಗಳನ್ನು ಒಳಗೊಂಡು ಉಗ್ರವಾದ ಹೋರಾಟ ಮಾಡಲಾಗುವುದೆಂದು ಹೇಳಿದ್ದಾರೆ.

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

5 hours ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

5 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

6 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

6 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

6 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

6 hours ago