ನಕಲಿ ಅಂಕಪಟ್ಟಿ: ಎಫ್‌ಐಆರ್‌ ದಾಖಲು.!

ಮಂಡ್.14.ಫೆ.25:-: ರಾಜ್ಯದಲ್ಲಿ ಪ್ರತಿದಿನ ಬೆಳಕಿಗೆ ಬರುತ್ತಿರುವ ನಕಲಿ ಅಂಕಪಟ್ಟಿ ಪ್ರಕರಣಗಳು ಇಲ್ಲಿ ಮತ್ತೊಂದ ನಕಲಿ ಅಂಕಪಟ್ಟಿ ಜಾಲ ಪತ್ತೆ.

ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ನಕಲಿ ಅಂಕಪಟ್ಟಿಗಳನ್ನು ಕೊಟ್ಟಿದ್ದಾರೆ’ ಎಂಬ ಆರೋಪದ ಮೇರೆಗೆ ವಿ.ವಿನೋದ್‌ ಎಂಬುವವರ ವಿರುದ್ಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಸಿನಕುಂಟೆಯ ಆದರ್ಶ ನಗರದ ನಿವಾಸಿ.

2022ರಲ್ಲಿ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸ್ನಾತಕೋತ್ತರ ಪದವಿಯನ್ನು (ಎಂ.ಟೆಕ್‌ ಇನ್‌ ಸಿವಿಲ್‌ ಎಂಜಿನಿಯರಿಂಗ್‌) ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ಪ್ರಥಮ ದರ್ಜೆಯೊಂದಿಗೆ ಪಡೆದಿರುವುದಾಗಿ ಹೇಳಿ, 2016ನೇ ಸಾಲಿನ ನಕಲಿ ಅಂಕಪಟ್ಟಿ ಸಲ್ಲಿಸಿದ್ದಾರೆ’ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್‌.ರವೀಂದ್ರ ದೂರು ಸಲ್ಲಿಸಿದ್ದರು.

‘ವಿನೋದ್‌ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿರ್ಮಿತಿ ಕೇಂದ್ರದಲ್ಲಿ 2014ರಿಂದ 2019ರವರೆಗೆ ಸಹಾಯಕ ಯೋಜನಾ ವ್ಯವಸ್ಥಾಪಕರಾಗಿ ಹಾಗೂ ಕೆಆರ್‌ಐಡಿಎಲ್‌ನಲ್ಲೂ ಕರ್ತವ್ಯ ನಿರ್ವಹಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ನಕಲಿ ಅಂಕಪಟ್ಟಿ ಸಲ್ಲಿಸಿ ಸರ್ಕಾರಕ್ಕೆ ವಂಚನೆ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರು ಪತ್ರದಲ್ಲಿ ಒತ್ತಾಯಿಸಿದ್ದರು.

ಆಯ್ಕೆ ರದ್ದು:

ಜಿಲ್ಲಾಧಿಕಾರಿ ಅಧ್ಯಕ್ಷತೆಯ ಆಯ್ಕೆ ಸಮಿತಿಯು 2023ರಲ್ಲಿ ವಿನೋದ್‌ ಅವರನ್ನು ವ್ಯವಸ್ಥಾಪಕರ ಹುದ್ದೆಗೆ ಆಯ್ಕೆ ಮಾಡಿದ್ದರ ಬಗ್ಗೆ ‌ಆಕ್ಷೇಪಿಸಿದ್ದ ಗುತ್ತಿಗೆದಾರ ರವಿಕುಮಾರ್‌ ಎಂಬುವವರು ದೂರು ಅರ್ಜಿ ಸಲ್ಲಿಸಿದ್ದರು. ಆಗ, ಅಂಕಪಟ್ಟಿಯ ನೈಜತೆ ಪರಿಶೀಲಿಸಲು ಮುಕ್ತ ವಿವಿ ಕುಲಸಚಿವರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದರು. ವಿನೋದ್‌ ಸ್ನಾತಕೋತ್ತರ ಪದವಿ ಪಡೆದಿಲ್ಲ ಎಂದು ಮುಕ್ತ ವಿವಿ ಮಾಹಿತಿ ನೀಡಿತ್ತು. ಹೀಗಾಗಿ ವಿನೋದ್‌ ಅವರ ಆಯ್ಕೆಯನ್ನು ರದ್ದುಗೊಳಿಸಲಾಗಿತ್ತು.

ಈ ನಕಲಿ ಅಂಕಪಟ್ಟಿಗಳ ಪ್ರಕರಣ ದಾಖಲಾಗಿದೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ಪ್ರಥಮ ದರ್ಜೆಯೊಂದಿಗೆ ಪಡೆದಿರುವುದಾಗಿ ಹೇಳಿ, 2016ನೇ ಸಾಲಿನ ನಕಲಿ ಅಂಕಪಟ್ಟಿ ಸಲ್ಲಿಸಿದ್ದಾರೆ’ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್‌.ರವೀಂದ್ರ ದೂರು ಸಲ್ಲಿಸಿದ್ದರು.

prajaprabhat

Recent Posts

ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧ: ಸರ್ಕಾರ ಆದೇಶ

ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ  ಮುಂಜಾಗ್ರತಾ ಕ್ರಮವಾಗಿ…

19 minutes ago

ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು.

ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…

38 minutes ago

ಪದವಿ ಕಾಲೇಜು 310 ಪ್ರಾಂಶುಪಾಲರ ನೇಮಕಾತಿ ಶೀಘ್ರವೇ.

ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ  ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…

2 hours ago

ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…

3 hours ago

ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು'…

10 hours ago

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

11 hours ago