ನಗರಸಭೆಯ ಹೊಗುತ್ತಿಗೆ ಪೌರ್ ಕಾರ್ಮಿಕರು ವಿವಿಧ ಬೇಡಿಕೆಗಳ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಕೂ.

* 20-30 ವರ್ಷಗಳಿಂದ ಸೇವೇ ಮಾಡಿದರೂಹುದ್ದೆ ಕಾಯಂ  ಇಲ್ಲ.

ಹೊಸಕೋಟೆ.01.ಜೂನ.25:- ರಾಜ್ಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರಸಭೆಯ ಹೊಗುತ್ತಿಗೆ ಪೌರ್ ಕಾರ್ಮಿಕರು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ನೇತೃತ್ವದಲ್ಲಿ ನಗರದ ನಗರ ಸಭೆ ಕಾರ್ಯಾಲಯ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ನಗರಸಭೆಯಲ್ಲಿ ಸುಮಾರು 20-30 ವರ್ಷಗಳಿಂದ ಸ್ವಚ್ಛತೆ, ಒಳಚರಂಡಿ ಸೇರಿದಂತೆ ನಾನಾ ಕೆಲಸವನ್ನು ಮಾಡುತ್ತಿರುವ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ವಾಹನ ಚಾಲಕರು, ಸಹಾಯಕರು, ಡೆಟಾ ಎಂಟ್ರಿ ಆಪರೇಟರ್‌ಗಳನ್ನು ಕಾಯಂಗೊಳಿಸಬೇಕು ಹಾಗೂ ಎನ್‌ಪಿಎಸ್‌ ರದ್ದುಗೊಳಿಸುವಂತೆ ಧರಣಿನಿರತರು ಆಗ್ರಹಿಸಿದರು.

ನಮ್ಮ ಬೇಡಿಕೆ ಈಡೇರಿಕೆ ಈಡೇರಿಸುವಂತೆ ಸರ್ಕಾರವನ್ನು ಹಲವು ವರ್ಷಗಳಿಂದ ಒತ್ತಾಯಿಸಿದ್ದರು. ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾಗರಿಕರಿಗೆ ಮೂಲ ಸೌಕರ್ಯ ಒದಗಿಸುವುದು ನಮ್ಮ ಕೆಲಸ. ಯಾವುದೇ ಸಮಸ್ಯೆ ಇರಲಿ, ಸಂದರ್ಭವಿರಲಿ ತಪ್ಪದೆ ನಮ್ಮ ಕಾಯಕವನ್ನು ನಿರ್ವಹಿಸಲೇಬೇಕು. ಇಷ್ಟೆಲ್ಲಾ ಕಷ್ಟಪಟ್ಟರು ನಮಗೊಂದು ಭದ್ರತೆ ನೀಡಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಅದಷ್ಟು ಬೇಗ ಸರ್ಕಾರ ನಮ್ಮ ಕಷ್ಟ ಅರ್ಥಮಾಡಿಕೊಂಡು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಮುಖಂಡರಾದ ಬಾಸ್ಕರ್, ಮಂಜುನಾಥ್, ಲೋಕೇಶ್, ಗಂಗಾಧರ್, ಉಮಾದೇವಿ, ಗೀತಮ್ಮ, ಶಿವಕುಮಾರ್, ಮಂಜಮ್ಮ, ನರಸಿಂಹ, ರಾಜರಾಜೇಶ್ವರಿ, ವಿನೋದ್, ಕಾಂತರಾಜ್ ಇದ್ದರು.

prajaprabhat

Recent Posts

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

3 hours ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

3 hours ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

3 hours ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

5 hours ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

5 hours ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

5 hours ago