ನನ್ನ ವಿರುದ್ಧ ಪಿತೂರಿಯ ರೂಪಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ

01ಜನವರಿ.25,ಬೆಂಗಳೂರು, ಗುತ್ತೇದಾರ ಸಚಿನ್ ಪಂಚಳ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ  ದಿನಾಲೂ ಬಿಜೆಪಿ ಮತ್ತು ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಜೋರಾಗಿ ನಡುತಿದೆ.

ಗುತ್ತೇದಾರ ಸಚಿನ ಪಾಂಚಾಳ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಸರ್ಕಾರದ ಮೇಲೆ ತುಂಬಾ ಪ್ರಭಾವ ಬೀಳುತ್ತಿದ್ದಾರೆ. ಈ ಮಧ್ಯೆ ಬಿಜೆಪಿಗೆ ಅಸ್ತಿತ್ವ ಉಳಿಸಿಕೊಳ್ಳಲು ಈಗ ನನ್ನ ಹೆಸರು ಅನಿವಾರ್ಯವಾಗಿದೆ, ಹಾಗಾಗಿ ನನ್ನ ವಿರುದ್ಧದ ಪಿತೂರಿಯ “ಟೂಲ್ ಕಿಟ್” ರೂಪಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಂದೆ ಬಿಜೆಪಿ vs ಕೆಜೆಪಿ ಬಡಿದಾಟವಿತ್ತು. ಈಗ ಬಿಜೆಪಿಯಲ್ಲಿ VJP vs YJP vs AJP ಬಡಿದಾಟ ನಡೆಯುತ್ತಿದೆ, ಈ ಬಡಿದಾಟವನ್ನು ಮರೆಮಾಚಲು ಹೋರಾಟ ಎಂಬ ನಾಟಕ ಶುರು ಮಾಡಿಕೊಂಡಿದೆ. ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ, ಕಾಫಿ, ಟಿ, ಬಿಸ್ಕೆಟ್ ಗಳ ಆತಿಥ್ಯವನ್ನೂ ನೀಡುತ್ತೇನೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಬಿಜೆಪಿ ನಾಯಕರು ಹೈಕಮಾಂಡಿಗೆ ತಮ್ಮ ಸಾಧನೆಯ ರಿಪೋರ್ಟ್ ಕಾರ್ಡ್ ತೋರಿಸಲು ನನ್ನ ಹೆಸರಿನಲ್ಲಿ ಹೋರಾಟದ ನಾಟಕ ಆರಂಭಿಸಿದ್ದಾರೆ, ನನ್ನ ಹೆಸರಿನ ಮೂಲಕ ವಿಜಯೇಂದ್ರರವರು “ಸಂಕ್ರಾಂತಿಯ ಡೆಡ್ ಲೈನ್” ದಾಟುವ ಪ್ರಯತ್ನ ನಡೆಸಿದ್ದಾರೆ.

ಡಿಯರ್ ಬಿಜೆಪಿ, ಸುಳ್ಳುಗಳ ಆಧಾರದಲ್ಲಿ ನನ್ನ ವಿರುದ್ಧ ಇಷ್ಟೆಲ್ಲಾ ಸುವ್ಯವಸ್ಥಿತವಾದ, ವಿವಿಧ ಮಾದರಿಯ ಹಾಗೂ ವ್ಯಾಪಕವಾದ ಹೋರಾಟ ಮಾಡುವ ಬದಲು ರಾಜ್ಯದ ಜನರೆದುರು ನಿಮ್ಮ “ನೈತಿಕತೆ”ಯನ್ನು ನಿರೂಪಿಸುವ ಹೋರಾಟ ಮಾಡಿ ಎಂದು ವಾಗ್ದಾಳಿ ಮಾಡಿದ್ದಾರೆ.

ಮಹಿಳೆಯರನ್ನು ಅತ್ಯಾಚಾರಗೈದು, ದಲಿತರನ್ನು ನಿಂದಿಸಿ, ಒಕ್ಕಲಿಗ ಮಹಿಳೆಯರನ್ನು ಮಂಚಕ್ಕೆ ಕರೆದ ಮುನಿರತ್ನರವರ ವಿರುದ್ಧ ಹೋರಾಟ ಮಾಡಿ, ಜನ ಮೆಚ್ಚುತ್ತಾರೆ.
ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಪೊಕ್ಸೋ ಪ್ರಕರಣ ಎದುರಿಸುತ್ತಿರುವ ಯಡಿಯೂರಪ್ಪನವರ ವಿರುದ್ಧ ಕರಪತ್ರ ಹಂಚಿ, ಜನ ಒಪ್ಪುತ್ತಾರೆ.


ಮಹಿಳೆಯರನ್ನು ಅತ್ಯಂತ ಕೊಳಕು ಭಾಷೆಯಲ್ಲಿ ನಿಂದಿಸಿದ ಸಿ.ಟಿ ರವಿಯವರ ಮನೆಗೆ ಮುತ್ತಿಗೆ ಹಾಕಿ, ಜನ ಜೈ ಅನ್ನುತ್ತಾರೆ.
ಕೋವಿಡ್ ಕಾಲದಲ್ಲಿ ಹೆಣದ ಮೇಲೆ ಹಣ ಮಾಡಿ, ಭ್ರಷ್ಟಾಚಾರದಿಂದ ಸಾವಿರಾರು ಜೀವ ತೆಗೆದ ಭ್ರಷ್ಟರ ವಿರುದ್ಧ ಕಪ್ಪು ಬಾವುಟ ತೋರಿಸಿ, ಜನ ಸಮಾಧಾನವಾಗುತ್ತಾರೆ.
ವಕ್ಫ್ ವರದಿ ಮುಚ್ಚಿ ಹಾಕಲು 150 ಕೋಟಿ ರೂ. ಆಮಿಷ ಒಡ್ಡಿದ ವಿಜಯೇಂದ್ರರವರ ವಿರುದ್ಧ ಪೋಸ್ಟರ್ ಪ್ರದರ್ಶನ ಮಾಡಿ, ಜನ ಬಹುಪರಾಕ್ ಹಾಕುತ್ತಾರೆ ಎಂದಿದ್ದಾರೆ.

ಬಿಜೆಪಿ ಈ ಎಲ್ಲಾ ಕೆಲಸಗಳನ್ನು ಮಾಡಿ, ರಾಜ್ಯದ ಜನಕ್ಕೆ ನೀವು ಎಸಗಿದ ದ್ರೋಹಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಿ, ನಿಮಗೂ “ನೈತಿಕತೆ” ಪದದ ಅರ್ಥ ತಿಳಿದಿದೆ ಎಂಬುದನ್ನು ನಿರೂಪಿಸಿ.

ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದೇ ಸತ್ಯವಾಗುತ್ತದೆ ಎಂಬ ಗೊಬೆಲ್ಸ್ ಸಿದ್ದಾಂತವನ್ನು ಮೆಚ್ಚಿ ನೆಚ್ಚಿಕೊಂಡಿರುವ ಬಿಜೆಪಿಗರು ಮುಂದಿನ ದಿನಗಳಲ್ಲಿ ಗೊಬೆಲ್ಸ್ ಕೂಡ ನಾಚುವಂತ ಸುಳ್ಳುಗಾರರಾಗಿ ಹೊರಹೊಮ್ಮಲಿದ್ದಾರೆ. ಅಂದಹಾಗೆ, ನನ್ನ ವಿರುದ್ಧ ಬಿಜೆಪಿ ರೂಪಿಸಿರುವ ಸುಳ್ಳುಗಳ ಈ ಟೂಲ್ ಕಿಟ್ ತುಂಬಾ ಸೊಗಸಾಗಿದೆ ಎಂದು ಹೇಳಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

1 hour ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

2 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

3 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

3 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

3 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

3 hours ago