ಬೀದರ.28.ಏಪ್ರಿಲ್.25:- ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಏಪ್ರಿಲ್, ಮೇ ಮತ್ತು ಜೂನ್ ತಿಂಗಳು ಕೂಲಿಕಾರರು ಕೆಲಸ ನಿರೀಕ್ಷಿಸುವ ತಿಂಗಳುಗಳಾಗಿದ್ದು, ಮೇ ತಿಂಗಳಿನಲ್ಲಿ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಒಂದು ಲಕ್ಷ ಜನ ಕೂಲಿಕಾರರಿಗೆ ಕೆಲಸ ನೀಡಲಾಗುವುದು ಎಂದು ಬೀದರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ಅವರು ಸೂಚಿಸಿದರು.ಅವರು ಶುಕ್ರವಾರದಂದು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಟಿಸಿಗಳು, ಟಿಐಎಂಎಸ್, ಟಿಐಇಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ಜರುಗಿಸಿ ಮಾತನಾಡಿದರು.
ಅವರು ಶುಕ್ರವಾರದಂದು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಟಿಸಿಗಳು, ಟಿಐಎಂಎಸ್, ಟಿಐಇಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ಜರುಗಿಸಿ ಮಾತನಾಡಿದರು.
ರೈತಾಪಿ ವರ್ಗದ ಅತಿಸಣ್ಣ ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಮತ್ತು ಮಹಿಳೆಯರಿಗೆ ಬೇಸಿಗೆ ಕಾಲದಲ್ಲಿ ಬೇರೆಕಡೆ ಕೆಲಸ ಸಿಗುವುದಿಲ್ಲವಾದ್ದರಿಂದ ಅವರು ಮನೆಗಳಲ್ಲಿ ಖಾಲಿ ಕುಳಿತುಕೊಳ್ಳುವಂತೆ ಆಗಬಾರದು. ತಾಲೂಕಾ ಐಇಸಿ ತಂಡದವರು ಮತ್ತು ಗ್ರಾಪಂಗಳ ಸಿಬ್ಬಂದಿಯವರು ಮನೆಮನೆಗೆ ಭೇಟಿ ನೀಡಿ ಕೂಲಿಕಾರರನ್ನು ಕೆಲಸಕ್ಕೆ ಆಹ್ವಾನಿಸಬೇಕು. ಪ್ರತಿ ಗುರುವಾರ ಗ್ರಾಮ ಪಂಚಾಯತಿಗಳಲ್ಲಿ ‘ರೋಜಗಾರ ದಿನಾಚರಣೆ’ ಆಚರಣೆ ಮಾಡಿ ಕೂಲಿಕಾರರಿಗೆ ಅವರವರ ಗ್ರಾಮಗಳಲ್ಲಿಯೇ ಕೆಲಸ ನೀಡುವ ಮಾಹಿತಿ ನೀಡಬೇಕು. ಹೊಸ ಉದ್ಯೋಗ ಚೀಟಿಗಳನ್ನು ನೀಡಬೇಕು.
ಕೂಲಿ ಕೆಲಸಕ್ಕೆ ಅರ್ಹರಿರುವ ಎಲ್ಲಾ ಗ್ರಾಮೀಣ ಕೂಲಿಕಾರರಿಗೆ ಕೆಲಸ ನೀಡಬೇಕು. ಮೇ ತಿಂಗಳಲ್ಲಿ ಪ್ರತಿ ಗ್ರಾಪಂಯಲ್ಲಿ 1000 ಕೂಲಿಕಾರರಿಗೆ ಕೆಲಸ ನೀಡಬೇಕು’ ಎಂದರು.
ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯಲ್ಲಿ 50,000 ಜನರಿಗೆ ಕೂಲಿಕೊಡಲು ಈ ಹಿಂದಿನ ವಿ.ಸಿಯಲ್ಲಿ ಸೂಚಿಸಿದ್ದರು. ಏಪ್ರಿಲ್ 25 ರಂದು ಇದ್ದಂತೆ ಜಿಲ್ಲೆಯಲ್ಲಿ 37000 ಜನ ಕೂಲಿಕಾರರಿಗೆ ಕೆಲಸ ನೀಡಿದ್ದು ಈ ತಿಂಗಳ ಮುಗಿಯುವುದರೊಳಗಾಗಿ ನೀಡಿದ ಗುರಿಯಂತೆ 50,000 ಜನ ಕೂಲಿಕಾರರಿಗೆ ಕೆಲಸ ನೀಡಬೇಕು ಎಂದು ಡಾ.ಗಿರೀಶ ಬದೋಲೆಯವರು ಎಲ್ಲಾ ತಾಲೂಕಾ ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಸಹಾಯಕ ಕಾರ್ಯದರ್ಶಿ ಬೀರೇಂದ್ರಸಿoಗ್, ಸಹಾಯಕ ನಿರ್ದೇಶಕ ಜಯಪ್ರಕಾಶ ಚೌಹಾಣ, ಗ್ರಾಮೀಣ ಕುಡಿಯುವ ನೀರು ಮತ್ತು ಪಂಚಾಯತ್ ರಾಜ್ ಇಂಜನಿಯರಿoಗ್ ವಿಭಾಗದ ಕಾರ್ಯಪಾಲಕ ಅಭಿಯಂತರರುಗಳಾದ ರಾಮಲಿಂಗ ಬಿರಾದರ, ಶಿವಾಜಿ ಡೋಣಿ, ಎಡಿಪಿಸಿ ದೀಪಕ್, ಹಣುಮಂತ ಚಿದ್ರಿ, ಡಿಐಎಂಎಸ್ ಕೋಮಲಾ, ಡಿಐಇಸಿ ರಜನಿಕಾಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…