Categories: ದೇಶ

ನರೇಗಾ ಯೋಜನೆಯ ಅಡಿಯಲ್ಲಿ ಹೊಸ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ರಾಜ್ಯ ಸರಕಾರದ ಪ್ರಸ್ತಾವನೆಗೆ

NREGA ಭಾರತ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿಕೆಲವು ಹೊಸ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ರಾಜ್ಯ ಸರಕಾರದ ಪ್ರಸ್ತಾವನೆಗೆ ವರ್ಷಗಳು ಕಳೆದರೂ ಕೇಂದ್ರ ಸರಕಾರದ “ಖಾತರಿ’ ಸಿಗುತ್ತಿಲ್ಲ.ದುಡಿಯ ಬಯಸುವ ಪ್ರತಿಯೊಂದು ಕೈಗೆ ಕೆಲಸ ಕೊಡಬೇಕು’ ಎಂಬ ಉದ್ದೇಶದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಅನುಷ್ಠಾನದಲ್ಲಿ ನಮ್ಮ ರಾಜ್ಯ ಮೊದಲಿಂದಲೂ ಮುಂಚೂಣಿಯಲ್ಲಿದೆ.

ಆ ಪರಂಪರೆ ಮುಂದುವರಿಸಿಕೊಂಡು ಹೋಗುವುದರ ಜತೆಗೆ ಹೆಚ್ಚು ಉದ್ಯೋಗಾವಕಾಶ ಸೃಷ್ಟಿಸಲು ಕೆಲವು ಹೊಸ ಅಭಿವೃದ್ಧಿ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೆತ್ತಿಕೊಳ್ಳಲು ಅನುಮತಿ ಕೋರಿ ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಮನವಿ ಮಾಡಿದೆ. ಆದರೆ ಈವರೆಗೆ ಸ್ಪಂದನೆ ಸಿಕ್ಕಿಲ್ಲ.
ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯಡಿ ಬರುವ ವಸತಿಶಾಲೆಗಳ ಕಾಂಪೌಂಡ್‌, ಆಟದ ಮೈದಾನ, ಮಳೆ ನೀರು ಕೊçಲು ಸೇರಿದಂತೆ ಗ್ರಾ.ಪಂ. ಕಟ್ಟಡ ನಿರ್ಮಾಣಕ್ಕೆ ನರೇಗಾ ಕಾಮಗಾರಿಯಲ್ಲಿ ಕ್ರಮ ಕೈಗೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ವರ್ಷದ ಮೇಲಾಗಿದೆ. ಆದರೆ ಇಲ್ಲಿವರೆಗೂ ರಾಜ್ಯದ ಪ್ರಸ್ತಾವನೆ ಕೇಂದ್ರಲ್ಲಿ ಬಾಕಿ ಇದೆ. ಈ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಆಯುಕ್ತರು ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪತ್ರಗಳನ್ನು ಬರೆದಿದ್ದಾರೆ. ಅದಾಗ್ಯೂ ಅನುಮೋದನೆ ಸಿಕ್ಕಿಲ್ಲ.

ಸಿಎಂ ಮೂಲಕ ಪತ್ರ ಬರೆಸಲು ಸೂಚನೆ
ಕೇಂದ್ರ ಸರಕಾರದ ಬಳಿ ಬಾಕಿ ಇರುವ ರಾಜ್ಯ ಸರಕಾರದ ಪ್ರಸ್ತಾವನೆಗಳ ಕುರಿತು ಇತ್ತೀಚೆಗೆ ರಾಜ್ಯ ಸರಕಾರದ ದಿಲ್ಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಈ ವಿಷಯವನ್ನು ಗಮನಕ್ಕೆ ತಂದಿದ್ದಾರೆ. ಅಲ್ಲದೆ ಕೇಂದ್ರ ಸರಕಾರದ ಬಳಿ ಬಾಕಿ ಇರುವ ರಾಜ್ಯ ಸರಕಾರದ ಪ್ರಸ್ತಾವನೆಗಳ ಕುರಿತು ಅಕ್ಟೋಬರ್‌ನಲ್ಲಿ ಪ್ರಧಾನಿ ಸಚಿವಾಲಯದ ಅಧಿಕಾರಿಗಳು ನಡೆಸಿದ ಪ್ರಗತಿ ಪರಿಶೀಲನೆ ಸಭೆಯಲ್ಲೂ ಈ ವಿಷಯ ಪ್ರಸ್ತಾವವಾಗಿದೆ.

ಈ ನಿಟ್ಟಿನಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವಾಲಯಕ್ಕೆ ಮುಖ್ಯಮಂತ್ರಿಯವರಿಂದ ಪತ್ರಗಳನ್ನು ಕಳುಹಿಸ
ಬೇಕು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಯವರಿಂದಲೂ ಒಂದು ಪತ್ರ ಕಳುಹಿಸಬೇಕು. ಹೊಸ ಪ್ರಸ್ತಾವನೆಗಳ ಮಾಹಿತಿ ಮತ್ತು ಕೇಂದ್ರ ಸರಕಾರಕ್ಕೆ ಬಂದಿರುವ ಎಲ್ಲ ಪತ್ರಗಳ ಪ್ರತಿಯನ್ನು ದಿಲ್ಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಿಗೆ ಸಲ್ಲಿಸಬೇಕು. ಅವುಗಳನ್ನು ಕ್ರೋಡೀಕರಿಸಿ ನಿವಾಸಿ ಆಯುಕ್ತರು ದಿಲ್ಲಿ ವಿಶೇಷ ಪ್ರತಿನಿಧಿಗೆ ಕಳುಹಿಸಬೇಕು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಹೊಸ ಕಾಮಗಾರಿಗಾಗಿ ಕೋರಿಕೆ
ಗ್ರಾಮ ಪಂಚಾಯತ್‌ಗಳಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣ, ಶಾಲಾ ಕೊಠಡಿಗಳ ನಿರ್ಮಾಣ, ಅಂಗನವಾಡಿ ಕೇಂದ್ರಗಳ ಕಾಂಪೌಂಡ್‌, ರೇಷ್ಮೆ ಸಾಕಾಣಿಕೆ ಮನೆಗಳ ನಿರ್ಮಾಣ ಮೇವಿನ ಮಣ್ಣು ಮತ್ತು ಬಾಳೆ ಕೃಷಿ ಇನ್ನಿತರ ಹೊಸ ಕಾಮಗಾರಿಗಳಿಗೆ ಅವಕಾಶ ಮಾಡಿಕೊಡುವಂತೆಯೂ ರಾಜ್ಯ ಸರಕಾರ ಮನವಿ ಸಲ್ಲಿಸಿದೆ. ವೈಯಕ್ತಿಕವಾಗಿ ಫ‌ಲಾನುಭವಿಗಳು ಕೊçಲೋತ್ತರ ಶೇಖರಣೆ ಘಟಕಗಳನ್ನು ನಿರ್ಮಿಸಿಕೊಳ್ಳಲು ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೆ ಕೇಂದ್ರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ತಿದ್ದುಪಡಿ ಮಾಡಿದ್ರೆ ಜನರಿಗೆ ಸ್ವಲ್ಪ ಅನುಕೂಲ್ ಆಗುವದು

prajaprabhat

Share
Published by
prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

5 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

5 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

6 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

6 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

6 hours ago