”ನಾನು ಕೂಡ ಸತ್ತಿದ್ರೆ ಚೆನ್ನಾಗಿತ್ತು” : ಕುಟುಂಬದ 10 ಮಂದಿಯನ್ನು ಕಳೆದುಕೊಂಡು ಕಣ್ಣೀರಿಟ್ಟ ಉಗ್ರ ಮಸೂದ್

ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ನಲ್ಲಿ ಮಸೂದ್ ನ ಸಹೋದರ, ಸಹೋದರಿ ಸೇರಿ 10 ಮಂದಿ ದಾಳಿಯಲ್ಲಿ ಹತ್ಯೆಗೀಡಾಗಿದ್ದಾರೆ. ಕಾರ್ಯಾಚರಣೆಗೆ ಪಾಕಿಸ್ತಾನದ ಪತರಗುಟ್ಟಿದೆ. ಈ ಕಾರ್ಯಾಚರಣೆಯಲ್ಲಿ ಉಗ್ರ ಮಸೂದ್ ತನ್ನ 10 ಮಂದಿಯನ್ನು ಕಳೆದುಕೊಂಡು ಕಣ್ಣೀರಿಟ್ಟಿದ್ದಾನೆ.

ಈ ದಾಳಿಯ ನಂತರ, ಮಸೂದ್ ಅಜರ್, ಈ ದಾಳಿಯಲ್ಲಿ ‘ನಾನು ಕೂಡ ಸತ್ತಿದ್ರೆ ಚೆನ್ನಾಗಿತ್ತು” ಎಂದು ಹೇಳಿದ್ದಾನೆ.
ನವದೆಹಲಿ: ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಭಯೋತ್ಪಾದಕ ಮತ್ತು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಜನರು ಸಾವನ್ನಪ್ಪಿದ್ದಾರೆ. ಭಾರತದ ದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ನಿಕಟ ಸಹಚರರು ಸೇರಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸ್ವತಃ ದೃಢಪಡಿಸಿದ್ದಾನೆ.

ಈ ದಾಳಿಯ ನಂತರ, ಮಸೂದ್ ಅಜರ್, ಈ ದಾಳಿಯಲ್ಲಿ ನಾನು ಸತ್ತಿದ್ರೆ ಚೆನ್ನಾಗಿತ್ತು ಎಂದು ಹೇಳಿದನು. “ಮೌಲಾನಾ ಕಶಾಫ್ ಅವರ ಇಡೀ ಕುಟುಂಬ ಮತ್ತು ಮೌಲಾನಾ ಮಸೂದ್ ಅಜರ್ ಅವರ ಹಿರಿಯ ಸಹೋದರಿ ಕೊಲ್ಲಲ್ಪಟ್ಟಿದ್ದಾರೆ ಮತ್ತು ಬಾಜಿ ಸಾದಿಯಾ ಅವರ ಪತಿ ಮುಫ್ತಿ ಅಬ್ದುಲ್ ರವೂಫ್ ಅವರ ಮೊಮ್ಮಕ್ಕಳು, ನಾಲ್ಕು ಮಕ್ಕಳು ಸೇರಿದಂತೆ ಹಿರಿಯ ಮಗಳು ಗಾಯಗೊಂಡಿದ್ದಾರೆ.

ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಕೊಲ್ಲಲ್ಪಟ್ಟಿದ್ದಾರೆ.ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಅಜರ್ ಕುಟುಂಬ ಸದಸ್ಯರು ಮತ್ತು ಹತ್ತಿರದ ಸಂಬಂಧಿಕರ ಅಂತ್ಯಕ್ರಿಯೆ ಇಂದು ನಡೆಯಲಿದೆ.ವೈಮಾನಿಕ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬದ 10 ಮಂದಿ ಸಾವನ್ನಪ್ಪಿದ್ದರು.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

3 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

3 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

3 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago