Home » ಲೈವ್ ನ್ಯೂಸ್ » ನಾಳೆ ಉದ್ಯೋಗ ಮೇಳ, ಸಿರಿಧಾನ್ಯ ಮೇಳ, ಫಲ ಮತ್ತು ಪುಷ್ಪ ಪ್ರದರ್ಶನ ಹಾಗೂ ಮತ್ಸö್ಯ ಮೇಳ ಕಾರ್ಯಕ್ರಮ

ನಾಳೆ ಉದ್ಯೋಗ ಮೇಳ, ಸಿರಿಧಾನ್ಯ ಮೇಳ, ಫಲ ಮತ್ತು ಪುಷ್ಪ ಪ್ರದರ್ಶನ ಹಾಗೂ ಮತ್ಸö್ಯ ಮೇಳ ಕಾರ್ಯಕ್ರಮ

Facebook
X
WhatsApp
Telegram

ಬೀದರ.21.ಫೆಬ್ರವರಿ.26:- ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಬೀದರ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಇವರ ಬೀದರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ.22 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಉದ್ಯೋಗ ಮೇಳ, ಸಿರಿಧಾನ್ಯ ಮೇಳ, ಫಲ ಮತ್ತು ಪುಷ್ಪ ಪ್ರದರ್ಶನ ಹಾಗೂ ಮತ್ಸö್ಯ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಮಾಡಲಿದ್ದಾರೆ.
ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ, ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಶರಣಪ್ರಕಾಶ ರುದ್ರಪ್ಪ ಪಾಟೀಲ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ದು ಪಾಟೀಲ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ್, ಡಾ.ಎಂ.ಜಿ.ಮೂಳೆ ಹಾಗೂ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಕೃಷ್ಣಾ ಮೇಲ್ದಂಡೆ ಯೋಜನೆ, ಭೀಮರಾಯನಗುಡಿ ಕಲಬುರಗಿಯ ಅಧ್ಯಕ್ಷರಾದ ಬಾಬು ಹೊನ್ನನಾಯ್ಕ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗವಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬೀದರ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಮಯ್ಯಾ ಸ್ವಾಮಿ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ವಿಶ್ವನಾಥ ಪಾಟೀಲ ಮಾಡಗೋಳ ಅವರುಗಳು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ರಂದೀಪ್ ಡಿ., ಸರ್ಕಾರದ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಪಂಚಾಯತ ರಾಜ್), ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಆಡಳಿತಾಧಿಕಾರಿಗಲು, ಜಿಲ್ಲಾ ಪಂಚಾಯತ ಬೀದರ ಇವರು ಭಾಗವಹಿಸಲಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology