ನಾಳೆ (ಫೆ.2) ಅರಣ್ಯ ಇಲಾಖೆಯ 2025ನೇ ಸಾಲಿನ ದಿನಚರಿ*ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭ.!

ಬೀದರ.31.ಜನವರಿ.25:-ಕಲ್ಯಾಣ ಕರ್ನಾಟಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ) ಕಲಬುರಗಿ ಇವರ ವತಿಯಿಂದ ಫೆಬ್ರವರಿ.2 ರಂದು ಬೆಳಿಗ್ಗೆ 11 ಗಂಟೆಗೆ ಲಾವಣ್ಯ ಕಲ್ಯಾಣ ಮಂಟಪ, ಗುರುದ್ವಾರ ಹತ್ತಿರ, ಜನವಾಡ-ಗುರುದ್ವಾರ ರಸ್ತೆ ಬೀದರದಲ್ಲಿ 2025ನೇ ಸಾಲಿನ ‘ದಿನಚರಿ ಹಾಗೂ ‘ದಿನದರ್ಶಿಕೆ’ ಬಿಡುಗಡೆ ಸಮಾರಂಭ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಮಾಡಲಿದ್ದಾರೆ.

ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ನವದೆಹಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೀನಾಕ್ಷಿ ನೇಗಿ, ಬೆಂಗಳೂರು ಪ್ರಧಾನ ಮುಖ್ಯ ಬೆಂಗಳೂರಿನ ಅರಣ್ಯ ಭವನದ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ ಕೆ.ಮಾಲ್ಖಡೆ, ಬೆಂಗಳೂರು ಅರಣ್ಯ ಭವನ (ಅಭಿವೃದ್ಧಿ) ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸೀಮಾ ಗರ್ಗ್, ಬೆಂಗಳೂರು ಅರಣ್ಯ (ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ ಹಾಗೂ ಹವಮಾನ ಬದಲಾವಣೆ) ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿ ಬಿ.ಪಿ., ಬೆಂಗಳೂರು ಅರಣ್ಯ ಭವನ (ಅರಣ್ಯ ಸಂರಕ್ಷಣೆ) ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ಕುಮಾರ, ಬೆಂಗಳೂರು (ಕಾಂಪಾ) ಅರಣ್ಯಭವನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಳಾದ ಎ.ರಾಧಾದೇವಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ಕಲಬುರಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುನೀಲ ಪಂವಾರ್, ಮುಖ್ಯ ಅತಿಥಿಗಳಾಗಿ ಬಳ್ಳಾರಿ ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಂದ್ರಶೇಖರ ನಾಯಕ, ಕಾರ್ಯಕ್ರಮದ ನೇತೃತ್ವ ಕಲಬುರಗಿ ಕ-ಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷರು ಹಾಗೂ ಬೀದರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎ.ಬಿ.ಪಾಟೀಲ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅತಿಥಿಗಳಾಗಿ ಬೀದರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಾನತಿ ಎಂ.ಎಂ., ವಿಜಯನಗರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅರಸಲನ್, ಕಲಬುರಗಿ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುಮೀತಕುಮಾರ್ ಪಾಟೀಲ, ಯಾದಗೀರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಭಾಕರ ಪ್ರಿಯದರ್ಶಿ, ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸಂದೀಪ ಸೂರ್ಯವಂಶಿ, ಕೊಪ್ಪಳ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾವ್ಯ ಚತುರ್ವೆದಿ, ಯಾದಗೀರಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಕೆ.ಭಗಾಯತ್, ರಾಯಚೂರು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುರೇಶ ಬಾಬು, ರಾಯಚೂರು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಕಲಬುರಗಿ ಕಲ್ಯಾಣ ಕರ್ನಾಟಕ ಅರಣ್ಯ ಇಲಾಖೆ ನೌಕರರ ಸಂಘದ ಉಪಾಧ್ಯಕ್ಷರಾದ ಪ್ರವೀಣ, ಕೊಪ್ಪಳ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುಸೇನ ಬಾಷಾ ಸೆಂದಾರಿ, ಬಳ್ಳಾರಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಕಂಡೆಯ, ಕಲಬುರಗಿ ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚೇತನ ಮಂಗಲ್ ಗಸ್ತಿ, ಬಳ್ಳಾರಿ ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿ ಜೆ.ಜಿ. ಅಟಲ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ ಕಮಲಾಪೂರ (ವಿಜಯನಗರ) ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ ನಾಯಕ, ಕಲಬುರಗಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾಗರ ತಾವಡೆ, ಜಿಲ್ಲಾ ಶಾಖೆ ಬೀದರ ಸರ್ಕಾರಿ ನೌಕರರ ಸಂಘದ ಸೋಮಶೇಖರ ಚಿದ್ರಿ, ಕಲಬುರಗಿ ಅರಣ್ಯ ನೌಕರರ ಸಂಘದ ನಿವೃತ್ತ ಅಧ್ಯಕ್ಷ ಆರ್.ಆರ್.ಯಾದವ, ಕಲಬುರಗಿ ಕ-ಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ) ಅಧ್ಯಕ್ಷ ಎ.ಬಿ.ಪಾಟೀಲ, ಕಲಬುರಗಿ ಕ-ಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ) ಉಪಾಧ್ಯಕ್ಷ ಪ್ರವೀಣ, ಕಲಬುರಗಿ ಕ-ಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ) ಖಜಾಂಚಿ ಬಸವರಾಜ ಡಾಂಗೆ, ಕಲಬುರಗಿ ಕ-ಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ) ಉಪಾಧ್ಯಕ್ಷ ಸುನಿಲಕುಮಾರ ಚವ್ಹಾಣ, ಕಲಬುರಗಿ ಕ-ಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ)ದ ಪ್ರಧಾನ ಕಾರ್ಯದರ್ಶಿ ರೇವಣಸಿದ್ದ ತಾವರಖೇಡ, ಕಲಬುರಗಿ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಸಂಜು ಕುಮಾರ ಚವ್ಹಾಣ, ಕಲಬುರಗಿ ವೃತ್ತದ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಖಾಲೀದ್ ಪಟೇಲ್, ಕಲಬುರಗಿ ವಿಭಾಗದ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಗುಂಡಪ್ಪ ಅರ್ಜುನ, ರಾಯಚೂರು ವಿಭಾಗದ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿಜಯಕುಮಾರ, ಯಾದಗೀರ ವಿಭಾಗದ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಹೆಚ್.ಬಿ.ಬಿರಾದಾರ, ಬೀದರ ವಿಭಾಗದ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಮಹಾದೇವ ಪಾಟೀಲ, ಬಳ್ಳಾರಿ ವೃತ್ತ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಮಹೇಶ, ಕಲಬುರಗಿ ವೃತ್ತದ ವಾಹನ ಚಾಲಕರ ಸಂಘದ ಅಧ್ಯಕ್ಷ ಅಬ್ದುಲ್ ಅಲೀಂ, ಕಲಬುರಗಿ ವೃತ್ತದ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಯಕ್ಷಂತಿ, ಯಾದಗೀರ ವಿಭಾಗದ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷ ರಿಜ್ವಾನ ರಾಜಾ, ಕಲಬುರಗಿ ವಿಭಾಗದ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷ ತಿಪ್ಪಣ್ಣ ಗಂಗಾಕರ್, ಬೀದರ ವಿಭಾಗದ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘಧ ಅಧ್ಯಕ್ಷ ಮಹೇಶ ಜಂಗೆ, ರಾಯಚೂರು ವಿಭಾಗದ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷ ವಿರೇಶ, ಕಲಬುರಗಿ/ಬಳ್ಳಾರಿ ಕಲ್ಯಾಣ ಕರ್ನಾಟಕ ಲಿಪಿಕ ನೌಕರರ ಸಂಘದ ಅಧ್ಯಕ್ಷ ಶರಣಪ್ಪ ಉಳ್ಳಾಗಡಿ, ಬೀದರ ಜಿಲ್ಲಾ ಶಾಖೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರು (ಅರಣ್ಯ ಇಲಾಖೆ) ಕಲ್ಲಪ್ಪ ಅವರುಗಳು ಭಾಗವಹಿಸಲಿದ್ದಾರೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

8 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

9 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago