ಬೆಂಗಳೂರು, 16.ಜನವರಿ.25:- ಬೀದರ್ ನ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ಇಂದು ಹಾಡು ಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಸಿಬ್ಬಂದಿಯನ್ನು ಕೊಂದು ಹಣ ದರೋಡೆ ಮಾಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಆರೋಪಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿನ ದಾಳಿಯಲ್ಲಿ ಸಿಬ್ಬಂದಿ ಮೃತಪಟ್ಟಿರುವುದು ತೀವ್ರ ನೋವಿನ ಸಂಗತಿ. ಮೃತರ ಕುಟುಂಬದವರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ ಅವರು, ಈ ನೋವಿನ ಸಂದರ್ಭದಲ್ಲಿ ಸರ್ಕಾರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ತಿಳಿಸಿದರು.
ವಿಷಯ ತಿಳಿದ ಕೂಡಲೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೊಂದಿಗೆ ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ತಾವು ಮಾತನಾಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಮತ್ತು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಕ್ರಮ ವಹಿಸಲು ಸೂಚಿಸಿರುವುದಾಗಿ ತಿಳಿಸಿದರು.
17ರಂದು ಮೃತರ ಮನೆಗೆ ಭೇಟಿ:
ಎ.ಟಿ.ಎಂ.ಗೆ ಹಣ ಸಾಗಿಸುವಾಗ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು, ಏನು ಲೋಪ ಆಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು, ನಾಳೆ ತಾವು ಬೀದರ್ ಗೆ ತೆರಳುತ್ತಿದ್ದು, ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವುದಾಗಿ ತಿಳಿಸಿದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…