ನಾವೇಲ್ಲರೂ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ-ಸಚಿವ ರಹೀಂ ಖಾನ್


ಬೀದರ.03ಫೆಬ್ರುವರಿ.25:- ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿ ವಚನಗಳನ್ನು ಸಂರಕ್ಷಿಸಿದ ವೀರಗಣಚಾರಿ ಗುರು ಆಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೇಲ್ಲರೂ ನಡೆಯೋಣ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವರಾದ ರಹೀಂ ಖಾನ್ ಹೇಳಿದರು.


ಅವರು ಇಂದು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ಅವರ ಸಂಯುಕ್ತಾಶ್ರಯದಲ್ಲಿ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಲಿಂಗಾಯತ ಧರ್ಮದಲ್ಲಿ ನಿμo್ಠವಂತ ಕಾಯಕನಿವಾಸಿಗಳಾಗಿದ್ದ ಮಡಿವಾಳ ಮಾಚಿದೇವರು ಸಮಾಜ ಸೇವೆಯಲ್ಲಿ ನಿರಂತರವಾಗಿ ತೋಡಗಿದರು. ಕಾಯಕದಲ್ಲಿ ದೇವರನ್ನು ಕಂಡರು, ದೇವರು ಗುಡಿಯಲ್ಲಿ ಇರುವುದಿಲ್ಲ, ದೇವರು ನಿರಾಕಾರನಾಗಿದ್ದು ಎಲ್ಲೆಡೆ ವಿಶ್ವವ್ಯಾಪಿಯಾಗಿದ್ದಾನೆ. ಎಲ್ಲರೂ ಉಸಿರಾಡುವ ಗಾಳಿ ಒಂದೇ. ದೇವರು ಒಬ್ಬನೇ ನಾಮ ಹಲವು ಎಂಬಂತೆ ನಾವೆಲ್ಲರೂ ಒಂದೇ ಸಮಾಜದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಬಾಳಬೇಕು ಎಂದರು.


ಬೀದರ ಅಕ್ಕಮಹಾದೇವಿ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕರಾದ ಶಿವಶರಣಪ್ಪಾ ಹುಗ್ಗಿ ಪಾಟೀಲ ಅವರು ತಮ್ಮ ಅತಿಥಿ ಉಪನ್ಯಾಸದಲ್ಲಿ ಮಾತನಾಡಿ, ಹನ್ನೆರಡನೆಯ ಶತಮಾನ ಅಚ್ಚರಿಯ ಶತಮಾನ. ಸಮಗ್ರ ಕ್ರಾಂತಿಯ ಶತಮಾನ, ಸಮಾನತೆಯ ಶತಮಾನ, ಬಟ್ಟೆ ತೊಳೆಯುವವರು, ಬುಟ್ಟಿ ಮಾಡುವವರು, ಕಸಗೂಡಿಸುವವರು, ದನ ಕಾಯುವವರು ಇಂತಹ ಸಾಮಾನ್ಯರಲ್ಲಿ ಸಾಮಾನ್ಯರನ್ನು ಸಂಸ್ಕಾರಕೊಟ್ಟು ಲೋಕಕ್ಕೆ ಅರಿವು ನೀಡುವ ಗುರುಸ್ವರೂಪವಾದರು, ಲೋಕ ಗುರುವಾದರು, ಇದಕ್ಕೆಲ್ಲ ಜಗವೆಲ್ಲಕ್ಕೂ ಗುರು ಎನಿಸಿಕೊಂಡ ಬಸವಣ್ಣನವರೇ ಕಾರಣರು. ವೀರಗಣಾಚಾರಿ, ವಚನ ಸಾಹಿತ್ಯದ ರಕ್ಷಕ ಮಹಾನುಭಾವಿ ಮಡಿವಾಳ ಮಾಚಿದೇವರ ತಂದೆಗಳು ಶರಣ ಶ್ರೇಷ್ಠರು. ಕೇವಲ ಬಟ್ಟೆ ತೊಳೆಯುವ ಮಡಿವಾಳರಾಗಿರದೆ ಸಕಲ ಮಾನವರಲ್ಲಿಯು ಮಲಿನತೆ ಹೋಗಲಾಡಿಸುವ ಗುರು ಸ್ವರೂಪರಾಗಿದ್ದರು.

ಲಿಂಗಾಂಗ ಸಾಮರಸ್ಯದ ಅನುಭಾವ ಜಗದ ಜನತೆಗೆ ತಿಳಿಹೇಳುವ ಮಹಾಜಂಗಮ ಮೂರ್ತಿಯಾಗಿದ್ದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ ಅವರು ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಡಿವಾಳ ಮಾಚಿದೇವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅವರು ಚಾಲನೆ ನೀಡಿದರು.


ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಸ್ವಾಮಿ ಮತ್ತು ತಂಡದಿಂದ ಮಡಿವಾಳ ಮಾಚಿದೇವರ ಕುರಿತು ವಚನ ಗಾಯನ ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಮಡಿವಾಳ ಮಾಚಿದೇವರ ಸಮಾಜದ ಜಿಲ್ಲಾಧ್ಯಕ್ಷ ಸುಭಾಷ್ ಮಡಿವಾಳ, ಉಪಾಧ್ಯಕ್ಷ ಬಾಬುರಾವ್ ಮಡಿವಾಳ ಹಾಗೂ ಮುಖಂಡರಾದ ದಿಗಂಬರ ಮಡಿವಾಳ, ಮಹೇಶ್ ಮಡಿವಾಳ, ಶಿವುಕುಮಾರ ಕಂದಗೂಳ, ಅಶೋಕ್ ತೇಲಂಗ್, ದೀಪಕ ಮಡಿವಾಳ, ಚನ್ನಬಸವ ಹೇಡೆ ಸೇರಿದಂತೆ ಇತರೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

5 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

6 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

7 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

16 hours ago