ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ, (ಹೊಸದು/ನವೀಕರಣ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸಹಾಯಧನ/ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಕೇಂದ್ರಗಳಲ್ಲಿ ಅನ್‌ಲೈನ್‌ನಲ್ಲಿ ಅರ್ಜಿಗಳನ್ನು ದಿನಾಂಕ: 04-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://ambigaradevelopment.karnataka.gov.in
ದಲ್ಲಿ ಅಥವಾ ನಿಗಮದ ದೂರವಾಣಿ ಸಂಖ್ಯೆ 080-22864099 ಗೆ ಸಂಪರ್ಕಿಸುವುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಅ/o ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಬೀದರ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.