ಬೆಂಗಳೂರು.15.ಫೆ.25:- ರಾಜ್ಯ ಸರ್ಕಾರ ವಾಸೋದ್ಯಮ ಇಲಾಖೆಯ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಸಹಾಯಧನ ನೀದೂತಿದೆ.
ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಸಹಾಯಧನ ಎಂಟರ್‍ಪ್ರನರ್‍ಶಿಪ್ ಪ್ರೋಗ್ರಾಮ್ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ.
ಈ ತರಬೇತಿ ಹಾಗೂ ಸಹಾಯಧನಕ್ಕೆ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ.
ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.
ತರಬೇತಿ ಕಾರ್ಯಕ್ರಮಗಳ ವಿವರ/ ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ ಇಂತಿದೆ. ಎಂಟರ್‍ಪ್ರೆನರ್‍ಶಿಪ್ ಪ್ರೋಗ್ರಾಮ್(ಇಪಿ)(ಎಸ್‍ಸಿ/ಎಸ್‍ಟಿ ಅಭ್ಯರ್ಥಿ) 10ನೇ ತರಗತಿ ಪಾಸಾಗಿರಬೇಕು.
1 ತಿಂಗಳ ತರಬೇತಿ, 20 ರಿಂದ 45 ವರ್ಷದೊಳಗಿರಬೇಕು.
2 ಪರಿಶಿಷ್ಟ ಜಾತಿ ಅಭ್ಯರ್ಥಿಗಳು, 01 ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿರಬೇಕು.
ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು
ಕೋಣೆಯ ದಿನಾಂಕ:
ಫೆಬ್ರವರಿ, 25 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.
ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ
ದಿನಾಂಕ: 25-02-2025 ರ ಸಂಜೆ : 05:00 ಗಂಟೆಯೊಳಗೆ ಉಪ ನಿರ್ದೇಶಕರು ಕಛೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಛೇರಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು ಕಚೇರಿ,
ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201
ದೂರವಾಣಿ ಸಂಖ್ಯೆ: 08272-200519,
ಅಥವಾ ಈ-ಮೇಲ್ ,
ddkodagutourism@gmail.com,
ಗೆ ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ ಅವರು ತಿಳಿಸಿದ್ದಾರೆ.
ಕೊಪ್ಪಳ.13.ಆಗಸ್ಟ್.25: ಕನಕಗಿರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಹೆಚ್.ಐ.ವಿ. ಏಡ್ಸ್ ಜಾಗೃತಿ ಅರಿವಿನ…
ಬೀದರ.13.ಆಗಸ್ಟ್.25:- ಇಂದು ಬೀದರ್ ಜಿಲ್ಲಾಡಳಿತ ವತಿಯಿಂದ ನಶಾ ಮುಕ್ತ ಭಾರತ ಅಭಿಯಾನ" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ…
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…