ನೂತನ ಜಿಲ್ಲಾ ಕೇಂದ್ರ ಗ್ರಂಥಾಲಯ ಉದ್ಘಾಟನೆಯುವ ವಿದ್ಯಾರ್ಥಿಗಳು ಪುಸ್ತಕ ಓದಿ ಜ್ಞಾನ ಸಂಪಾದಿಸಿ-ಸಚಿವ ಈಶ್ವರ ಖಂಡ್ರೆ


ಬೀದರ.13.ಫೆಬ್ರುವರಿ.25:- ಯುವ ವಿದ್ಯಾರ್ಥಿಗಳು ದಿನನಿತ್ಯ ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದಿ ಜ್ಞಾನ ಸಂಪಾದಿಸಿ ಜೀವನದಲ್ಲಿ ಯಶಸ್ಸು ಸಾಧಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಕರೆ ನೀಡಿದರು.


ಇಂದು ಬೀದರ ನಗರದಲ್ಲಿ 2022-23ನೇ ಸಾಲಿನ ಕೆಕೆಆರ್‍ಡಿಬಿ ಮ್ಯಾಕ್ರೊ ಯೋಜನೆ ಅಡಿಯಲ್ಲಿ 2.5 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಜಿಲ್ಲಾ ಕೇಂದ್ರ ಗ್ರಂಥಾಲಯದ ನೂನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.


ಜ್ಞಾನವೇ ಸಂಪತ್ತು, ಜ್ಞಾನ ಗಳಿಸಲು ವಿದ್ಯಾರ್ಥಿಗಳು ಪುಸ್ತಕಗಳನ್ನು, ಪತ್ರಿಕೆಗಳನ್ನು ನಿಯತಕಾಲಿಕೆಗಳನ್ನು ಓದಬೇಕು. ಶೈಕ್ಷಣಿಕ ಅಭ್ಯಾಸದ ಜೊತೆ ಇತರೇ ಜ್ಞಾನವನ್ನು ಸಹ ಗಳಿಸಬೇಕು. ಗ್ರಂಥಾಲಯದಲ್ಲಿ ಎಲ್ಲ ತರಹದ ಪುಸ್ತಕಗಳಿವೆ, ಒಟ್ಟು 10 ಲಕ್ಷ ವಿವಿಧ ವಿಷಯಗಳ ಪುಸ್ತಕಗಳಿದ್ದು ತಾಲ್ಲೂಕಾ ಮಟ್ಟದ ಗ್ರಂಥಾಲಯಗಳಿಗೆ ಕಳಿಸಲಾಗುತ್ತದೆ ಎಂದರು.


ಇಂದು ಜಗತ್ತು ಒಂದು ಹಳ್ಳಿಯಾಗಿದೆ, ಅಧುನಿಕ ವಿಜ್ಞಾನ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನದ ಪರಿಣಾಮವಾಗಿ ಯುವಕರು ಸಾಮಾಜಿಕ ಜಾಲತಾಣದಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಫೇಸ್‍ಬುಕ್, ಇನಸ್ಟಾಲ್ ಗ್ರಾಂ, ಟ್ವಿಟಿರ್, ರೀಲ್ಸ್‍ಗಳನ್ನೇ ವೀಕ್ವಿಸುತ್ತಾರೆ. ಇದರಿಂದ ಆರೋಗ್ಯಕ್ಕೂ ಹಾನಿಕಾರಕ. ಪುಸ್ತಕ ಓದುವುದರಿಂದ ಹೆಚ್ಚಿನ ಜ್ಞಾನ ಗಳಿಸಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದರು.


ಪ್ರತಿದಿನ 500-600 ವಿದ್ಯಾರ್ಥಿಗಳು ಗ್ರಂಥಾಲಯಕ್ಕೆ ಭೇಟಿ ನೀಡುತ್ತಾರೆ. ಮುಂಬರುವ ದಿನಗಳಲ್ಲಿ ಡಿಜಿಟಲ್ ಗ್ರಂಥಾಲಯವನ್ನು ಇಲ್ಲಿ ಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದೆಂದು ಅವರು ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

12 minutes ago

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

5 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

6 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

6 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

12 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

12 hours ago