ಸ್ವಸಹಾಯ ಸದಸ್ಯರುಗಳನ್ನು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಗದಗ ಜಿಲ್ಲೆಯ ಗಜೇಂದ್ರಗಡ ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತು ನಗರ ಸ್ಥಳೀಯ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ನಲ್ಮ-ಡೇ ಯೋಜನೆಯ ಸ್ವಸಹಾಯ ಸದಸ್ಯರುಗಳನ್ನು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅವಕಾಶವಿದೆ,
ಕನಿಷ್ಟ ಎಸ್‌ಎಸ್‌ಎಲ್‌ಸಿ ಪಾಸ್ , ಕನ್ನಡ ಭಾಷೆ ಓದು ಬರಹ ಜ್ಞಾನ ಹೊಂದಿರಬೇಕು. 18-45 ವರ್ಷ ವಯೋಮಾನದವರಾಗಿರಬೇಕು.
ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ದಾಖಲಾತಿಯೊಂದಿಗೆ ಮೇ 31 ರ ಸಂಜೆ 5 ಗಂಟೆಯೊಳಗಾಗಿ ನಿಗದಿತ ಅರ್ಜಿ ನಮೂನೆ ಪಡೆದು ಮಾಹಿತಿಯನ್ನು ಭರ್ತಿ ಮಾಡಿ ಖುದ್ದಾಗಿ ಮುಖ್ಯಾಧಿಕಾರಿಗಳು ಪುರಸಭೆ ಗಜೇಂದ್ರಗಡರವರ ವಿಳಾಸಕ್ಕೆ ದ್ವಿಪ್ರತಿಯಲ್ಲಿ ಸಲ್ಲಿಸತಕ್ಕದ್ದು. ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಗಜೇಂದ್ರಗಡ ಪುರಸಭೆಯ ಆರೋಗ್ಯ ಶಾಖೆಯನ್ನು ಸಂಪರ್ಕಿಸಬಹುದಾಗಿದೆ.
ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಐಇಸಿ ಚಟುವಟಿಕೆಗಳ ನಿರ್ವಹಣೆಗೆ ಸ್ವಸಹಾಯ ಮಹಿಳಾ ಸದಸ್ಯರನ್ನು ಕಮ್ಯುನಿಟಿ ಮೊಬಲೈಜರ್ ಹುದ್ದೆಗೆ ಮಹಿಳಾ ಸದಸ್ಯರ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ಅಡಿಯೆಲ್ಲಿ ನಡೆಯಲಿದೆ.