ಬೀದರ.18.ಜನವರಿ.25 ಬೀದರ ಎಟಿಎಂ ಹಣ ದರೋಡೆ ನೈತಿಕ ಹೊಣೆ ಹೊತ್ತು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ : ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ
ಎಟಿಎಂಗೆ ಹಣ ತುಂಬುವ ಸಿಬ್ಬಂದಿ ಗಿರಿ ವೆಂಕಟೇಶ್ಗೆ ದುಷ್ಕರ್ಮಿಗಳು ಶೂಟೌಟ್ ಮಾಡಿದ್ದು ನಿಜಕ್ಕೂ ಖಂಡನೀಯ. ಇದರ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರು ರಾಜೀನಾಮೆ ನೀಡಬೇಕೆಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಡವರ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ.
ಇಸ್ಪಿಟ್ ಅಡ್ಡೆಗಳು ತಲೆ ಎತ್ತಿವೆ. ವೇಶ್ಯಾವಾಟಿಕೆ ಆರಂಭವಾಗಿದೆ. ಇವು ಮಾನವೀಯ ಸಮಾಜ ತಲೆತಗ್ಗಿಸುವ ಕಾರ್ಯವಾಗಿವೆ. ಬಸವಣ್ಣನವರ ಅನುಯಾಯಿ ಎಂದು ಹೇಳಿಕೊಳ್ಳುವ ಉಸ್ತುವಾರಿ ಸಚಿವರು ಈ ಎಲ್ಲಾ ಅನೈತಿಕ ಚಟುವಟಿಕೆಗಳನ್ನು ನಿಲ್ಲಿಸಬೇಕಾಗಿದೆ. ಕೆಲವು ಅಪರಾಧಿಗಳನ್ನು ರಕ್ಷಿಸುತ್ತಿರುವ ಸಚಿವರು ಜನರ ನಿರೀಕ್ಷೆಗಳನ್ನು ಹುಸಿಗೊಳಿಸಬಾರದು. ಅಧಿಕಾರದ ಅಮಲು, ಅಹಂಕಾರವನ್ನು ಬದಿಗಿಟ್ಟು ಜಿಲ್ಲೆಯ ಜನತೆಯ ಹಿತಾಸಕ್ತಿ ಮತ್ತು ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಸೂಚಿಸಿದರು.
ಬಿಜೆಪಿಯ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಮಾತನಾಡಿ, ನಗರದಲ್ಲಿ ಹಾಡುಹಗಲೇ ಎಟಿಎಂ ಹಣ ದರೋಡೆ ಮಾಡಿ, ಒಬ್ಬ ವ್ಯಕ್ತಿಯನ್ನು ಕೊಂದು ಪರಾರಿಯಾಗಿದ್ದು ನಿಜಕ್ಕೂ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆಯಾಗಿದೆ.
ಗೃಹಸಚಿವರು ರಾಜ್ಯದಲ್ಲಿ ಇದ್ದಾರೋ, ಇಲ್ಲವೋ ಎಂಬುದು ಅನುಮಾನದಿಂದ ನೋಡುವಂತಾಗಿದೆ. ಗೃಹ ಇಲಾಖೆ ರಾಜ್ಯದಲ್ಲಿ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪೊಲೀಸ್ ಇಲಾಖೆಯು ಅಪರಾಧಗಳನ್ನು ತಡೆಯುವಲ್ಲಿ ಸಂಪೂರ್ಣವಾಗಿದೆ ವಿಫಲವಾಗಿದೆ ಎಂದು ಆರೋಪಿಸಿದರು.
ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ಬರುವ ಚಿದ್ರಿಯ ಗಿರಿ ವೆಂಕಟೇಶ್ ಹತ್ಯೆಯಾಗಿದ್ದು ನಿಜಕ್ಕೂ ಖಂಡನೀಯ. ಮೃತರ ಕುಟುಂಬಕ್ಕೆ ಸರ್ಕಾರ 1 ಕೋಟಿ ರೂ. ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ನೀಡಿ ಸರ್ಕಾರದಿಂದ ಖಾಯಂ ಮಾಡಬೇಕು. ಈ ರೀತಿ ಹಾಡಹಗಲೇ ಹತ್ಯೆ ಮಾಡಿದ್ದರ ಹಿಂದೆ ಯಾರ ಕೈವಾಡವಿದೆ ಎಂಬ ಕುರಿತು ಸಮಗ್ರ ತನಿಖೆಯಾಗಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ. ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಮಾಜಿ ಬುಡಾ ಅಧ್ಯಕ್ಷ ಬಾಬು ವಾಲಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಶಿಧರ್ ಹೊಸಳ್ಳಿ ಹಾಗೂ ಗುರುನಾಥ್ ಜ್ಯಾಂತಿಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…