ಪಡಿತರ ಚೀಟಿಗೆ ಇ-ಕೆವೈಸಿ  ಮಾಡಿಸಿಕೊಳ್ಳಲು ಅಂತಿಮ ಅವಕಾಶ


ಬೀದರ.23.ಜನವರಿ.25:- ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯಗೊಳಿದೆ. ಸರ್ಕಾರ ನೀಡಿರುವ ಈ ಅಂತಿಮ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಬೀದರ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇ-ಕೆವೈಸಿ ಸಂಗ್ರಹಣೆಯ ಕಾರ್ಯ ಪ್ರತಿ ದಿನ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಮಾಡಿಸಿಕೊಳ್ಳಲು ಕಾಲಾವಕಾಶ ನೀಡಲಾಗಿದೆ. ಇ-ಕೆವೈಸಿ ಮಾಹಿತಿ ಸಂಗ್ರಹಣೆ ಕಾರ್ಯವನ್ನು ಮಾಡುವುದಕ್ಕಾಗಿ ಸರ್ಕಾರವೇ ನ್ಯಾಯಬೆಲೆ ಅಂಗಡಿಯವರಿಗೆ ಹಣ ಪಾವತಿ ಮಾಡುತ್ತಿದೆ.

ಆದ್ದರಿಂದ ಪಡಿತರ ಚೀಟಿದಾರರು ಈ ಪ್ರಕ್ರಿಯೆಗೆ ಯಾವುದೇ ಹಣ ಸಂದಾಯ ಮಾಡುವ ಅವಶ್ಯಕತೆ ಇರುವುದಿಲ್ಲ.

ಇದೂ ಸಂಪೂರ್ಣ ಉಚಿತವಾಗಿರುತ್ತದೆ. ಆಧಾರ್ ಮತ್ತು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ವ್ಯತ್ಯಾಸವಿದ್ದಲ್ಲಿ ಅಂತಹವರು ತಮ್ಮ ನ್ಯಾಯಬೆಲೆ ಅಂಗಡಿಗೆ ಹೋಗಿ (ಇ-ಕೆವೈಸಿ) ಮಾಡಿಸಿಕೊಂಡಲ್ಲಿ ಸರಿಯಾಗುವುದೆಂದು ತಿಳಿಸಿದೆ.

ಬೆರಳಚ್ಚು ಹೊಂದಾಣಿಕೆ ಆಗದ ಪಡಿತರ ಚೀಟಿ ಸದಸ್ಯರು ಗ್ರಾಮ ಓನ್/ಕರ್ನಾಟಕ ಓನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಸಿ ಓ.ಟಿ.ಪಿ ಮೂಲಕ ಅಪಡೇಟ್ ಮಾಡಿಕೊಳ್ಳುವುದು.


ಕಾರಣ ಪಡಿತರ ಚೀಟಿದಾರರು ನಿಮ್ಮ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರ ಇ-ಕೆವೈಸಿ ಬೆರಳಚ್ಚು (ಬಯೋಮೆಟ್ರಿಕ್) ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ ಪರಿಶೀಲಿಸಿಕೊಳ್ಳಬೇಕು.

ಇಲ್ಲಿಯವರೆಗೆ ಜಿಲ್ಲೆಯ ಹಲವಾರು ಪಡಿತರ ಚೀಟಿದಾರ ಇ-ಕೆವೈಸಿ ಆಗದೇ ಇರುವವರ ಮಾಹಿತಿಯನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರದರ್ಶಿಸಲಾಗಿದ್ದು, ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ (ಇ-ಕೆವೈಸಿ) ಮಾಡಿಕೊಳ್ಳಲು ಅವರು ತಿಳಿಸಿದ್ದಾರೆ.

prajaprabhat

Recent Posts

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

1 hour ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

2 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

2 hours ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

2 hours ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

3 hours ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

3 hours ago