ಕಲಬುರಗಿ.31.ಮಾರ್ಚ್.25:-ಮಾಹಿತಿ ಹಕ್ಕು ಕಾರ್ಯಕರ್ತ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧ್ಯೆ ಮಾಹಿತಿ ಹಕ್ಕು ಅಡಿಯಲ್ಲಿ ಮಾಹಿತಿ ಕೇಳಿದಕೆ ಪಿಡಿಒ ಅವರು ಬೆದರಿಕೆ ಮತ್ತು ಮಾತಿನ ಚಕಮಕಿ ನಡೆಸಿದಕೆ ಪಿಡಿಒ ಅವರಿಗೆ ಅಮಾನತು ಮಾಡಲಾಗಿದೆ.
ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ಕೋರಿದ್ದ ಪತ್ರಕರ್ತರೊಬ್ಬರಿಗೆ ಬೆದರಿಕೆ ಹಾಕಿ ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಚಿತ್ತಾಪುರ ತಾಲ್ಲೂಕಿನ ಅಳ್ಳೊಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೇಂದ್ರಪ್ಪ ಭಾಲ್ಕಿ ಅವರನ್ನು ಅಮಾನತು ಮಾಡಲಾಗಿದೆ.
ಪತ್ರಿಕೆಯೊಂದರ ವರದಿಗಾರ ನಾಗಯ್ಯ ಸ್ವಾಮಿ ಅಲ್ಲೂರು ಅವರು 15ನೇ ಹಣಕಾಸು ಯೋಜನೆಯಡಿ ಖರ್ಚಾದ ಮಾಹಿತಿ ಕೊಡುವಂತೆ ಅಳ್ಳೊಳ್ಳಿ ಗ್ರಾ.ಪಂ.ಗೆ ಆರ್‌ಟಿಐ ಅರ್ಜಿ ಹಾಕಿದ್ದರು. ಖರ್ಚಿನ ಮಾಹಿತಿಯನ್ನು ನೀಡದೆ ಅರ್ಜಿದಾರನಿಗೆ ಫೋನ್ ಕರೆ ಮಾಡಿದ್ದ ದೇವೇಂದ್ರಪ್ಪ, ‘ಬ್ಲಾಕ್‌ಮೇಲ್ ಮಾಡಲು ಅರ್ಜಿ ಹಾಕಿದ್ದೀಯಾ, ಪೊಲೀಸರಿಗೆ ದೂರು ಕೊಟ್ಟು ಒಳ ಹಾಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದರು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ನಾಗಯ್ಯ ಸ್ವಾಮಿ ಅವರು ಚಿತ್ತಾಪುರ ಕಾರ್ಯನಿರ್ವಾಹಕ ಅಧಿಕಾರಿಗೆ (ಇಒ) ದೂರು ಸಲ್ಲಿಸಿದ್ದರು. ದೇವೇಂದ್ರಪ್ಪ ಅವರಿಗೆ ಇಒ ನೋಟಿಸ್ ನೀಡಿದ್ದರೂ ಸಮಜಾಯಿಷಿ ನೀಡಿರಲಿಲ್ಲ.
ಜತೆಗೆ ಆರ್‌ಟಿಐ ಅಡಿ ಮಾಹಿತಿಯೂ ಕೊಡದೆ ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ, ದೇವೇಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…