10/06/2025 3:08 PM

Translate Language

Home » ಲೈವ್ ನ್ಯೂಸ್ » ಪದವಿ ಪೂರ್ವ ಮತ್ತು ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ 2000 ಗೌರವಧನ.!

ಪದವಿ ಪೂರ್ವ ಮತ್ತು ಪದವಿ  ಕಾಲೇಜು ಅತಿಥಿ ಉಪನ್ಯಾಸಕರಿಗೆ 2000 ಗೌರವಧನ.!

Facebook
X
WhatsApp
Telegram

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

2025-26ನೇ ಸಾಲಿನ ಬಜೆಟ್‌  ಮನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಪದವಿ ಪೂರ್ವ ಮತ್ತು ಪದವಿ  ಕಾಲೇಜು ಅತಿಥಿ ಉಪನ್ಯಾಸಕರಿಗೆ 2000  ಅತಿಥಿ ಉಪನ್ಯಾಸಕರ ಗೌರವಧನ ₹2,000 ಹೆಚ್ಚಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ ₹2,000 ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ ₹1,000 ಹೆಚ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರಿಗೆ ಯಾವುದೇ 1 ನಯಾ ಪೈಸೆ ಏರಿಕೆ ಆಗಿಲ್ಲ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!