ಪದವಿ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕೌಶಲ ಯೋಜನೆ.
ಬೆಂಗಳೂರು.21.ಜನವರಿ.26: ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 95 ಸಾವಿರ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕೌಶಲ ಕಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಹೇಳಿದ್ದಾರೆ.
“ಬ್ರಿಟಿಷ್ ಕೌನ್ಸಿಲ್, ಮೈಕ್ರೋಸಾಫ್ಟ್ ಸಹಯೋಗದಲ್ಲಿ ಈ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 31 ಸರ್ಕಾರಿ ಪದವಿ ಕಾಲೇಜುಗಳು, 29 ಪಾಲಿಟೆಕ್ನಿಕ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕೌಶಲ ಕಲಿಕೆ ಆರಂಭಿಸಲಾಗುತ್ತಿದೆ.
ರಾಜ್ಯದ 95,000 ವಿದ್ಯಾರ್ಥಿಗಳಿಗೆ ಈ ಯೋಜನೆಯ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.
16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಈಗಾಗಲೇ ಯೋಜನೆ ಜಾರಿಯಲ್ಲಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಅಧ್ಯಯನ ಸಂಪನ್ಮೂಲಗಳು, ಡಿಜಿಟಲ್ ಸಾಧನಗಳು, ಇಂಗ್ಲಿಷ್ ತರಬೇತಿ ಕ್ಲಬ್ ಗಳ ಮೂಲಕ ಇಂಗ್ಲಿಷ್ ಅಭ್ಯಾಸದ ಅವಕಾಶ ಸಿಗಲಿದೆ. ಅಲ್ಲದೇ, ದೇಶ ವಿದೇಶಗಳಲ್ಲಿ ಉದ್ಯೋಗ ಪಡೆದುಕೊಳ್ಳುವ ಅರ್ಹತೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

