14/06/2025 12:13 PM

Translate Language

Home » ಲೈವ್ ನ್ಯೂಸ್ » ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ

Facebook
X
WhatsApp
Telegram

ಬೀದರ.12.ಜೂನ್.25:- ನ್ಯಾಯಮೂರ್ತಿಗಳಾದ ಗೌರವಾನ್ವಿತ ನಾಗಮೋಹನ್‌ದಾಸ್, ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ದಿನಾಂಕ: 02-06-2025 ರಿಂದ 08-06-2025 ರವರೆಗೆ ಕೇವಲ ವಿಶೇಷ ಶಿಬಿರಗಳು ಮತ್ತು ಆನ್‌ಲೈನ್ ಲಿಂಕ್‌ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳುವುದರ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ದಿನಾಂಕ: 06-06-2025 ರವರೆಗೆ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 90 ರಷ್ಟು ಪ್ರಗತಿಯಾಗಿದ್ದು, ಸಮೀಕ್ಷಾ ಕಾರ್ಯದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕಾಗಿರುವುದರಿಂದ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಜಿಲ್ಲೆಯ ಪರಿಶಿಷ್ಟ ಜಾತಿ ಕುಟುಂಬದವರಿಗೆ 22-06-2025 ರವರೆಗೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾರಣ ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಲೂರು ಒನ್, ಗ್ರಾಮ್ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶವನ್ನು ಕಲ್ಪಿಸಲಾಗುವುದು. ಬಿ.ಬಿ.ಎಂ.ಪಿ. ವ್ಯಾಪ್ತಿಯ 198 ಬಿ.ಬಿ.ಎಂ.ಪಿ.ವಾರ್ಡ ಕಚೇರಿಗಳಲ್ಲಿ ವ್ಯವಸ್ಥೆ ಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳು.

ಇದಲ್ಲದೇ ಆನ್‌ಲೈನ್  https://schedulecastesurvey.karnataka.gov.in/selfdeclaration  ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ದಿನಾಂಕ: 22-06-2025 ರವರೆಗೆ ವಿಸ್ತರಿಸಲಾಗಿದೆಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!