|

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷಾ ಕಾರ್ಯಾವಧಿ ವಿಸ್ತರಣೆ

ದಾವಣಗೆರೆ.11.ಜೂನ್.25:- ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲು ಮೇ.5 ರಿಂದ ಮನೆ ಮನೆ ಭೇಟಿ ಮೂಲಕ ರಾಜ್ಯಾದ್ಯಂತ ಈಗಾಗಲೇ ಸಮೀಕ್ಷೆಯನ್ನು ನಡೆಸುತ್ತಿಲಾಗುತ್ತಿದೆ.

ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕಾಗಿರುವುದರಿಂದ ಜೂನ್ 9 ರಿಂದ 22ರವರೆಗೆ ಸಮೀಕ್ಷೆಯನ್ನು ಅವಧಿಯನ್ನು ವಿಸ್ತರಿಸಲಾಗಿದೆ.

ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಗ್ರಾಮ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರ ಬಿ.ಬಿ.ಎಂ.ಪಿ ವ್ಯಾಪ್ತಿಯ 198 ಬಿ.ಬಿ.ಎಂ.ಪಿ ವಾರ್ಡ್ ಕಚೇರಿಗಳಲ್ಲಿ ವ್ಯವಸ್ಥೆಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳಲ್ಲಿ ಸಮೀಕ್ಷೆಗೆ ಅವಕಾಶವನ್ನು ಕಲ್ಪಿಸಲಾಗಿದೆ.

ಆನ್ ಲೈನ್ https://schedulecastesurvey.karnataka.gov.in/selfdeclaration

ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ಸಹ ಜೂನ್ 22 ರವರೆಗೆ ವಿಸ್ತರಿಸಲಾಗಿದೆ ಎಂದು ಹರಿಹರ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *