ಬೆಂಗಳೂರು.20.ಮೇ.25:- ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ.
ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡಂತೆ ಆನ್‌ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
*ಆನ್‌ಲೈನ್ ಮೂಲಕ ಸ್ವಯಂ ಘೋಷಣೆ:*
ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್‌ಲೈನ್ ಲಿಂಕ್
https://schedulecastesurvey,karnataka.gov.in/
(https://schedulecastesurvey,karnataka.gov.in/selfdeclaraion) ರ ಮೂಲಕ ಮೇ 19 ರಿಂದ ಮೇ 28 ರವರೆಗೆ ಸ್ವಯಂಘೋಷಣೆ ಮಾಡಿಕೊಳ್ಳಲು ಕಲ್ಪಿಸಲಾಗಿದೆ.
ಆನ್‌ಲೈನ್‌ನಲ್ಲಿ ಸ್ವಯಂಘೋಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಯೂಟ್ಯೂಬ್ ಲಿಂಕ್
https://youtu.be/VASEcMhL930 ಮೂಲಕ ತಿಳಿದುಕೊಳ್ಳಬಹುದು.
ಎಲ್ಲಾ ಪ.ಜಾತಿ ಬಾಂದವರು ತಮ್ಮ ಜಾತಿ, ಉಪಜಾತಿ ವಿವರಗಳನ್ನು ದಾಖಲಾತಿಗಳನ್ನು ಉಪಯೋಗಿಸಿಕೊಳ್ಳಲು ಸ್ವಯಂದೃಢೀಕರಣ ಮಾಡಿಕೊಳ್ಳಬುಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…