04 ಡಿಸೆಂಬರ್ ಬಳ್ಳಾರಿ:-ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ 5 ವಾರದ ನಾಟಿ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ವಿತರಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿ ಬಳ್ಳಾರಿ-08392-276358, ಕಂಪ್ಲಿ-08393200103, ಕುರುಗೋಡು-08394239530, ಸಿರುಗುಪ್ಪ-08396220336 ಮತ್ತು ಸಂಡೂರು-08395260338 ಗೆ ಸಂಪರ್ಕಿಸಬಹುದು.