09/06/2025 10:58 AM

Translate Language

Home » ಲೈವ್ ನ್ಯೂಸ್ » ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಆಭ್ಯರ್ಥಿಗಳಿಗೆ ಉದ್ಯೋಗ ಅವಕಾಶ, ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಆಭ್ಯರ್ಥಿಗಳಿಗೆ ಉದ್ಯೋಗ ಅವಕಾಶ, ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಆಹ್ವಾನ

Facebook
X
WhatsApp
Telegram


ಬೀದರ.24.ಜನವರಿ.25:- ಬೀದರ್ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಆಭ್ಯರ್ಥಿಗಳಿಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ  (Entrepreneurship)  ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 06 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 04 ಆಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ವಸತಿಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಕನಿಷ್ಠ ವಿದ್ಯಾರ್ಹತೆ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.


ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಬೀದರ ಕಚೇರಿಯಿಂದ ಪಡೆದು ಜನವರಿ.31 ರೊಳಗಾಗಿ ಸ್ವಯಂ ದೃಢೀಕೃತ ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಬೀದರ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!