ಬೀದರ.24.ಜನವರಿ.25:- ಬೀದರ್ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಆಭ್ಯರ್ಥಿಗಳಿಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ (Entrepreneurship) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 06 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 04 ಆಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ವಸತಿಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಕನಿಷ್ಠ ವಿದ್ಯಾರ್ಹತೆ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಬೀದರ ಕಚೇರಿಯಿಂದ ಪಡೆದು ಜನವರಿ.31 ರೊಳಗಾಗಿ ಸ್ವಯಂ ದೃಢೀಕೃತ ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಬೀದರ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…