ಬೆಂಗಳೂರು ಗ್ರಾಮಾಂತರ .ಜಿಲ್ಲೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ ಗಳ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
http://www.twd.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಕೊನೆಯ: ಜೂನ್ 13. ಜೂನ್.25′
ಪಿ.ಯು.ಸಿ/ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸಲು ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಜಾತಿ ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣಪತ್ರ/ಅಂಕಪಟ್ಟಿ ಹೊಂದಿರಬೇಕು. ಚಾಲ್ತಿಯಲ್ಲಿರುವ ಮತ್ತು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರ. ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿ ನಂತರ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 217, 2ನೇ ಮಹಡಿ, ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ದೃಢೀಕೃತ ದಾಖಲೆಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787448 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…