ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು.18.ಜೂನ್.25:- ರಾಜ್ಯ ಸರ್ಕಾರ ಸಮುದಾಯದ ವಿದ್ಯಾರ್ಥಿಗಳಿಗೆ ಶುಭ ಸುಧಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರೋತ್ಸಾಹಧನ ವಿವರ:

PUC 2nd ದ್ವಿತೀಯ ಪಿಯುಸಿ ರೂ.20 ಸಾವಿರ,

Degree ಪದವಿ ರೂ.25 ಸಾವಿರ,

ಯಾವುದೇ ಪೋಸ್ಟ್ ಗ್ರ್ಯಾಜ್ಯುವೇಟ್ ಕೋರ್ಸ್

PG ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ.30.ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ.

ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.

ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.

ಈ ಕೋರ್ಸ್‍ಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿ ಕಂಪಾರ್ಟ್‍ಮೆಂಟಲ್/ ಕ್ಯಾರಿ ಓವರ್ ಸಿಸ್ಟಮ್‍ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ.

ಕರ್ನಾಟಕ ರಾಜ್ಯದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.

ರಾಜ್ಯ, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ ವಿದ್ಯಾಸಂಸ್ಥೆಗಳಿಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಹರಿರುವುದಿಲ್ಲ.

ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಬೇಕು. ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ನೇಟಿವ್ ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.

ಆನ್‍ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು: ದ್ವಿತೀಯ ಪಿಯುಸಿಗೆ ಅಭ್ಯರ್ಥಿಯ ಭಾವಚಿತ್ರ, ದ್ವಿತೀಯ ಪಿಯುಸಿ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಅಭ್ಯರ್ಥಿಯ ಭಾವಚಿತ್ರ, ಎಲ್ಲಾ ಸೆಮ್‍ಗಳ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ.

ವಿದ್ಯಾರ್ಥಿಗಳು www.tw.kar.nic.in ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್‍ಫ್ರೀ ದೂ.ಸಂ.080-22634300, 080-22353757

ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ದೂ.ಸಂ. 9480843156 ಮತ್ತು 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

8 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

13 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

18 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

23 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

24 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

24 hours ago